ಎಂ.ಕೆ ಗಣಪತಿ 
ರಾಜ್ಯ

DYSp ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾ. ಕೇಶವ ನಾರಾಯಣ ಆಯೋಗದ ಶಿಫಾರಸ್ಸು ತಿರಸ್ಕಾರ

ಹಿಂದಿನ ಗೃಹ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ವಿರುದ್ಧ ಗಣಪತಿ ಸಂದರ್ಶನದಲ್ಲಿ ಆರೋಪಿಸಿರುವುದನ್ನು ತಳ್ಳಿ ಹಾಕಿ, ಗಣಪತಿ ಆತ್ಮಹತ್ಯೆಗೆ ಇವರು ಕಾರಣವಲ್ಲ ಎಂಬ ಅಭಿಪ್ರಾಯವನ್ನು ಕೇಶವ ನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ.

ಬೆಂಗಳೂರು: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವ ನಾರಾಯಣ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸನ್ನು ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು.

2016ರ ಜು.7ರಂದು ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ಆನಂತರ, ಮುಖ್ಯಮಂತ್ರಿಗಳ ಆದೇಶದಂತೆ ಈ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವ ನಾರಾಯಣ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಲಾಗಿತ್ತು ಎಂದು ಹೇಳಿದರು.

ವಿಚಾರಣಾ ಆಯೋಗವು 2018ರ ಫೆ.26ರಂದು ಸರಕಾರಕ್ಕೆ ವರದಿಯನ್ನು ಸಲ್ಲಿಸಿತ್ತು. ಆ ವರದಿಯಲ್ಲಿನ 8 ಭಾಗಗಳ ಕುರಿತು ಅಧ್ಯಯನ ನಡೆಸಿ ಆ ವರದಿಯಲ್ಲಿನ ಎಲ್ಲ ಅಂಶಗಳು ಹಾಗೂ ಶಿಫಾರಸ್ಸುಗಳನ್ನು ಪರಿಶೀಲಿಸಿ ಅಧ್ಯಯನ ವರದಿಯನ್ನು ನೀಡಲು ಸರಕಾರವು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಂ.ಕೆ.ಶ್ರೀವಾಸ್ತವ್ ಅವರನ್ನು ನೇಮಿಸಿತ್ತು ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಹಿಂದಿನ ಗೃಹ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ವಿರುದ್ಧ ಗಣಪತಿ ಸಂದರ್ಶನದಲ್ಲಿ ಆರೋಪಿಸಿರುವುದನ್ನು ತಳ್ಳಿ ಹಾಕಿ, ಗಣಪತಿ ಆತ್ಮಹತ್ಯೆಗೆ ಇವರು ಕಾರಣವಲ್ಲ ಎಂಬ ಅಭಿಪ್ರಾಯವನ್ನು ಕೇಶವ ನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದೆ ಎಂದು ಅವರು ತಿಳಿಸಿದರು.

ಆಂತರಿಕ ಒತ್ತಡದಿಂದ ಸಾವು' ಸಂಭವಿಸಿದ್ದಾಗಿ ಉಲ್ಲೇಖೀಸುವ ಮೂಲಕ ಆರೋಪಿ ಸ್ಥಾನದಲ್ಲಿದ್ದ ಕೆ.ಜೆ. ಜಾರ್ಜ್‌ ಅವರಿಗೆ ಕ್ಲೀನ್‌ ಚಿಟ್‌ ನೀಡಿತ್ತು. ಆದರೆ, ಉಳಿದ ಆರೋಪಿಗಳಾದ ಐಪಿಎಸ್‌ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಶಿಫಾರಸು ಮಾಡಿತ್ತು.

ಈ ವರದಿಯ ಅಧ್ಯಯನಕ್ಕಾಗಿ ನಿವೃತ್ತ ಪೊಲೀಸ್‌ ಅಧಿಕಾರಿ ಎಂ.ಕೆ. ಶ್ರೀವಾಸ್ತವ್‌ ಅವರ ಸಮಿತಿ ರಚಿಸಿದ್ದ ಸರಕಾರ, ಅದರ ಅನುಸಾರ ನ್ಯಾ. ಕೇಶವನಾರಾಯಣ ಅವರ ವರದಿಯನ್ನು ತಿರಸ್ಕರಿಸಿದೆ. ಈ ನಡುವೆ ಸಿಬಿಐ ತನಿಖೆಯಲ್ಲೂ ಜಾರ್ಜ್‌ ಅವರಿಗೆ ಕ್ಲೀನ್‌ ಚಿಟ್‌ ಸಿಕ್ಕಿದ್ದು, ಇದನ್ನು ಪ್ರಶ್ನಿಸಿದ್ದ ಸುಪ್ರೀಂಕೋರ್ಟ್‌ನಲ್ಲೂ ಹಿನ್ನಡೆ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ `ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಇಂದು ಭಾರತೀಯ ವಾಯುಪಡೆಯಿಂದ ವಿದಾಯ

ಲಡಾಕ್ ಲಡಾಯಿ: ಅ. 7 ರ ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಉತ್ತರ ಪ್ರದೇಶ: ಎನ್ಕೌಂಟರ್ ನಂತರ ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನ

ರಸ್ತೆ ಗುಂಡಿಯಷ್ಟೇ ಅಲ್ಲ, ಸಿಲಿಕಾನ್ ಸಿಟಿ ಜನರ ಕಾಡುತ್ತಿದೆ ಬೀದಿ ದೀಪಗಳ ಸಮಸ್ಯೆ..!

SCROLL FOR NEXT