ರಾಯಚೂರು: ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಅಪಘಾತ: ಹೊಲಕ್ಕೆ ಉರುಳಿದ KSRTC ಬಸ್; ಹಲವರಿಗೆ ಗಾಯ
ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ.
ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಚಾಲಕ, ನಿರ್ವಾಹಕ ಸೇರಿ 16 ಜನರಿದ್ದರು.
ಬಸ್ ಪಲ್ಟಿಯಿಂದ ಬಸ್ನಲ್ಲಿ ಓರ್ವ ಪ್ರಯಾಣಿಕನ ಕಾಲು ಸಿಲುಕಿ ಒದ್ದಾಡಿದ್ದಾನೆ. ಪೊಲೀಸರು, ಸ್ಥಳೀಯರ ಸಹಾಯದಿಂದ ಪ್ರಯಾಣಿಕನನ್ನು ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.
ಅಲ್ಲದೇ ಬಸ್‌ನಲ್ಲಿದ್ದ ಸುಮಾರು 8 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.