ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ 
ರಾಜ್ಯ

ಮೈಸೂರು: ಪಂಚಭೂತಗಳಲ್ಲಿ ಸಾಹಿತಿ ಎಸ್‌.ಎಲ್‌ ಭೈರಪ್ಪ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ 'ಅಕ್ಷರ ಮಾಂತ್ರಿಕ'ನ ಅಂತ್ಯಕ್ರಿಯೆ

ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು.

ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT