ಡಿ.ಕೆ.ಶಿವಕುಮಾರ್‌-ರಹೀಮ್ ಖಾನ್ 
ರಾಜ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭ: ಡಿ.ಕೆ ಶಿವಕುಮಾರ್‌-ರಹೀಮ್ ಖಾನ್ ಖಾತೆಗಳಲ್ಲಿ ಬದಲಾವಣೆ

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯಾರಂಭವಾಗಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್‌ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.

ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಯ ಮೇರೆಗೆ ಖಾತೆಗಳನ್ನು ಮಾರ್ಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರ ಅಭಿವೃದ್ಧಿ ಇಲಾಖೆಗಳನ್ನು ಮೊದಲಿಗೆ ನೀಡಲಾಗಿತ್ತು. ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಸೇರಿದಂತೆ ಪ್ರಮುಖ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರ ಅಭಿವೃದ್ಧಿಯನ್ನು ವಹಿಸಲಾಗಿತ್ತು.

ಇದೀಗ ಹಳೆಯ ಖಾತೆಯಾದ ಜಲಸಂಪನ್ಮೂಲ ಇಲಾಖೆ ಜೊತೆಗೆ ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ಪಟ್ಟಣ ಯೋಜನೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ನಗರ ನಿಗಮಗಳು ಮತ್ತು ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ ನೀಡಲಾಗಿದೆ.

ಹಾಗೆಯೇ ರಹೀಮ್ ಖಾನ್ ಅವರಿಗೆ ಪೌರಾಡಳಿತ ಹಾಗೂ ಹಜ್ ಖಾತೆ ಉಳಿದಿದ್ದರೂ ಬೆಂಗಳೂರು ನಗರ ಜಿಲ್ಲೆಯ ಅಡಿಯಲ್ಲಿ ಬರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಜವಾಬ್ದಾರಿ ಡಿ ಕೆ ಶಿವಕುಮಾರ್‌ ಅವರ ಪಾಲಾಗಿದೆ.

ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ರಾಜ್ಯಪಾಲರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel