ಗುಂಡಿಕ್ಕಿ ಹತ್ಯೆ 
ರಾಜ್ಯ

ಉಡುಪಿ: ಹಾಡಹಗಲೇ ರೌಡಿಶೀಟರ್ ಗುಂಡಿಕ್ಕಿ ಹತ್ಯೆ, ಭದ್ರತೆ ಹೆಚ್ಚಿಸಿದ ಪೊಲೀಸರು

ಪ್ರತ್ಯಕ್ಷದರ್ಶಿಗಳು ಹೇಳುವಂತೆ ದಾಳಿಕೋರರು ಹಲವಾರು ಬಾರಿ ಗುಂಡು ಹಾರಿಸಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಿದ್ದಾರೆ.

ಉಡುಪಿ: ಜಿಲ್ಲೆಯ ಮಲ್ಪೆ ಪ್ರದೇಶದಲ್ಲಿ ಶನಿವಾರ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಮಣಿಪಾಲ ನಿವಾಸಿ ಸೈಫುದ್ದೀನ್ (38) ಎಂದು ಗುರುತಿಸಲಾಗಿದ್ದು, ಸಾರಿಗೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮತ್ತು ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ವಿವಾದಗಳಲ್ಲಿಯೂ ಅವರು ಸಂಬಂಧ ಹೊಂದಿದ್ದಾರೆಂದು ಮೂಲಗಳು ಸೂಚಿಸಿದ್ದು, ಕೊಲೆಗೆ ನಿಖರವಾದ ಕಾರಣ ಏನೆಂಬುದನ್ನು ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಸೈಫುದ್ದೀನ್ ಅವರ ಕೆಲಸದ ಸ್ಥಳದ ಬಳಿ ಅವರ ಮೇಲೆ ದಾಳಿ ನಡೆಸಲಾಗಿದೆ. ಬೆಳಿಗ್ಗೆ 10.30 ರ ಸುಮಾರಿಗೆ ಅಪರಿಚಿತ ಹಲ್ಲೆಕೋರರ ಗುಂಪು ಅವರ ಮೇಲೆ ಗುಂಡು ಹಾರಿಸಿದೆ.

ಪ್ರತ್ಯಕ್ಷದರ್ಶಿಗಳು ಹೇಳುವಂತೆ ದಾಳಿಕೋರರು ಹಲವಾರು ಬಾರಿ ಗುಂಡು ಹಾರಿಸಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಹಲವಾರು ತಂಡಗಳನ್ನು ರಚಿಸಲಾಗಿದೆ. ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದೇವೆ. ಹತ್ಯೆಯ ಹಿಂದಿನ ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಈ ಸಂಬಂಧ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಪೊಲೀಸರು ಮಲ್ಪೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದಾರೆ ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ, ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

SCROLL FOR NEXT