ರಾಜ್ಯ

ಬಾಗಲಕೋಟೆ: ಬೀಳಗಿಯ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ; ಇಬ್ಬರು ಸಾವು, ಮೂವರು ಗಂಭೀರ ಗಾಯ

ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ​ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರು ಮತ್ತು ಟಂಟಂ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27ವ) ಮತ್ತು ಮೆಹಬೂಬ್ ಶೇಖ್‌ (30ವ) ಮೃತ ದುರ್ದೈವಿಗಳು. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೋವಾ ಚಾಲಕನ ಅಜಾಗರೂಕತೆ

ಊಟಕ್ಕೆಂದು ಸಮೀಪದ ವಿಜಯಪುರ ಜಿಲ್ಲೆಯ ಕೊಲ್ಹಾರಕ್ಕೆ ತೆರಳಿದ್ದ ಐವರಿದ್ದ ಟಂಟಂ ವಾಹನ ತಡರಾತ್ರಿ ​ ಬಾಗಲಕೋಟೆ ಕಡೆಗೆ ವಾಪಸ್ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಹೇಶ್ ನಾಯ್ಕರ್ (27ವ) ಮತ್ತು ಮೆಹಬೂಬ್ ಶೇಖ್‌ (30ವ) ಮೃತ ದುರ್ದೈವಿಗಳು. ವಿಶಾಲ್ ವರತಿಲ್ಲೆ, ವಿಜಯಕುಮಾರ್ ಭೋವಿ, ಗುರುಪ್ರಸಾದ್ ಸುಂಕದ ಗಾಯಾಳುಗಳಾಗಿದ್ದಾರೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

Belagavi BlackBuck Death Case: 31 ಕೃಷ್ಣಮೃಗಗಳ ಸಾವಿಗೆ 'Hemorrhagic Septicemia' ಸೋಂಕು ಕಾರಣ..!

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿಕೆ.ಶಿವಕುಮಾರ್

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ-Video

SCROLL FOR NEXT