ಅಜಯ್ ಕುಮಾರ್ ಮತ್ತು ಸ್ವೀಟಿ ಶರ್ಮಾ 
ರಾಜ್ಯ

ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆಗೆ ಶರಣು!

ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಂಡೀಗಡ: ಗುರುಗ್ರಾಮದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ತನ್ನ ಹೆಂಡತಿಯೊಂದಿಗೆ ಜಗಳವಾಡಿ ನಂತರ ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ ಕುಮಾರ್ ಮತ್ತು ಪಶ್ಚಿಮ ಬಂಗಾಳದ ಅಸನ್ಸೋಲ್ ನಿವಾಸಿ ಸ್ವೀಟಿ ಶರ್ಮಾ (28) ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಇಬ್ಬರೂ ಗುರುಗ್ರಾಮ್‌ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ, ಶರ್ಮಾಳ ದೇಹವು ನೆಲದ ಮೇಲೆ ಬಿತ್ತು. ಆಕೆಯ ಕುತ್ತಿಗೆಗೆ ಸ್ಕಾರ್ಫ್‌ನಿಂದ ಬಿಗಿದು ಹತ್ಯೆ ಮಾಡಿರುವುದು ಕಂಡುಬಂತು. ಕುಮಾರ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಘಟನೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮಹಿಳೆಯ ಕುಟುಂಬವು ಕುಮಾರ್ ವಿರುದ್ಧ ಕೊಲೆ ಆರೋಪ ಹೊರಿಸಿ ದೂರು ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT