ಸಂಗ್ರಹ ಚಿತ್ರ 
ರಾಜ್ಯ

ಆಯುಧ ಪೂಜೆ: ಸ್ವಚ್ಛತಾ ಕಾರ್ಯಗಳಲ್ಲಿ ಕಾವೇರಿ ನೀರನ್ನು ಮಿತವಾಗಿ ಬಳಸಿ: BWSSB ಮನವಿ

ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು.

ಬೆಂಗಳೂರು: ಆಯುಧ ಪೂಜೆ ಹಬ್ಬದ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಕಾವೇರಿ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯಿಂದ ಬಳಸವಂತೆ ಸಾರ್ವಜನಿಕರಿಗೆ ಬೆಂಗಳೂರು ನೀರಾವರಿ ಮತ್ತು ಒಳಚರಂಡಿ ಮಂಡಳಿ ಸೋಮವಾರ ಮನವಿ ಮಾಡಿದೆ.

ಈ ಸಂಬಂಧ ಬಿಡಬ್ಲ್ಯೂಎಸ್ಎಸ್'ಬಿ ಪ್ರಕಟಣೆ ಹೊರಡಿಸಿದ್ದು, ಆಯುಧ ಪೂಜೆ ಹಬ್ಬದ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಕಾವೇರಿ ನೀರನ್ನು ಮಿತವಾಗಿ ಮತ್ತು ಜವಾಬ್ದಾರಿಯಿಂದ ಬಳಸವಂತೆ ಹಾಗೂ ಅಗತ್ಯವಿಲ್ಲದ ವ್ಯರ್ಥವನ್ನು ತಪ್ಪಿಸುವಂತೆ ಮನವಿ ಮಾಡಿದೆ.

ಆಯುಧ ಪೂಜೆಯ ಸಂದರ್ಭದಲ್ಲಿ ಮನೆಮನೆಗಳಲ್ಲಿ ಮತ್ತು ಅಂಗಡಿಗಳಲ್ಲಿ ಹಲವಾರು ಸ್ವಚ್ಛತಾ ಚಟುವಟಿಕೆಗಳು ನಡೆಯುತ್ತವೆ. ನೀರನ್ನು ಬಳಕೆ ಮಾಡುವುದರಲ್ಲಿ ತಪ್ಪಿಲ್ಲ, ಆದರೆ ಅದು ಮಿತವಾಗಿಯೂ ಹೊಣೆಗಾರಿಕೆಯಿಂದಲೂ ಇರಬೇಕು. ಕಾವೇರಿ ನೀರು ಪವಿತ್ರವೂ ಅಮೂಲ್ಯವೂ ಆಗಿದ್ದು, ಅದನ್ನು ಸರಿಯಾದ ಉದ್ದೇಶಕ್ಕೆ ಮಾತ್ರ ಬಳಸಬೇಕು. ಅನಗತ್ಯ ವ್ಯರ್ಥವನ್ನು ತಡೆಯಬೇಕು.

ಕುಡಿಯುವ ನೀರಿನ ಮೂಲಗಳು ಸೀಮಿತವಾಗಿರುವುದರಿಂದ ಹಬ್ಬದ ಸಂಭ್ರಮವನ್ನು ಜವಾಬ್ದಾರಿಯಿಂದ ಆಚರಿಸಬೇಕು, ನೀರಿನ ಸಂರಕ್ಷಣೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

H1B ವೀಸಾ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯಾಗುತ್ತದೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಲುಟ್ನಿಕ್

ಗಾಜಾ ಸಂಘರ್ಷ ಕೊನೆಗೆ ಡೊನಾಲ್ಡ್ ಟ್ರಂಪ್ 20 ಅಂಶಗಳ ಯೋಜನೆ: ಪ್ರಧಾನಿ ಮೋದಿ ಸ್ವಾಗತ

ಪುರುಷರ Asia Cup ಹೈಡ್ರಾಮಾ: ಮಹಿಳಾ ವಿಶ್ವಕಪ್ ನಲ್ಲಿ ಏನಾಗುತ್ತದೆ,ಅ.5ರ ಪಂದ್ಯ ಮೇಲೆ ಎಲ್ಲರ ಚಿತ್ತ

ನೆತನ್ಯಾಹು-ಟ್ರಂಪ್ ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಂತ ಹಂತವಾಗಿ ಹಿಂದೆ ಸರಿಯಲಿರುವ ಇಸ್ರೇಲ್

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ: ಹಾನಿ ಬಗ್ಗೆ ಕುರಿತು ಇಂದು ಸಿಎಂ ವೈಮಾನಿಕ ಸಮೀಕ್ಷೆ

SCROLL FOR NEXT