ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಸರ್ಕಾರದ ದಿನಗೂಲಿ ನೌಕರರಿಗೆ 5 ಲಕ್ಷ ರೂ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿ!

ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ 5 ಲಕ್ಷ ರೂ.ವರೆಗಿನ ನಗದು ರಹಿತ ಆರೋಗ್ಯ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಈ ಸೌಲಭ್ಯವನ್ನು ತಮಗೂ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೂ ಆರೋಗ್ಯ ಭದ್ರತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ.

HFW 36 CGE 2026 (1).pdf
Preview

ಈ ಯೋಜನೆ ಪ್ರಕಾರ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5,00,000 ರೂ. ವರೆಗೆ ನಗದು ರಹಿತ ಚಿಕಿತ್ಸೆ ಲಭ್ಯವಿರುತ್ತದೆ. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯ ಫಲಾನುಭವಿಗಳು. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾರ್ಚ್ 31, 2026 ರಂದು ಈ ಆದೇಶವನ್ನು ಹೊರಡಿಸಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಸಾವಿರಾರು ದಿನಗೂಲಿ ನೌಕರರ ಕುಟುಂಬಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಆರ್ಥಿಕ ನೆರವು ಸಿಗುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!