ಸಂಗ್ರಹ ಚಿತ್ರ 
ರಾಜ್ಯ

ಗೃಹ ಸಚಿವ ಪರಮೇಶ್ವರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: FIR ದಾಖಲು

‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿರುವ ವಿಚಾರವಾಗಿ ಸೈಬರ್ ಅಪರಾಧ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರಮೇಶ್ವರ್ ಅವರಿಗೆ ಸಂಬಂಧಿಸಿದ ನೆಲಮಂಗಲ ತಾಲ್ಲೂಕಿನ ಟಿ. ಬೇಗೂರುದಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಘಟನೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಲಾಗಿತ್ತು.

‘ಹಿಂದೂ ಜಾಗೃತನಾಗು’ ಹೆಸರಿನ ‘ಎಕ್ಸ್’ ಖಾತೆಯಲ್ಲಿ ಈ ಆಕ್ಷೇಪಾರ್ಹ ಪೋಸ್ಟ್ ಹಾಕಲಾಗಿತ್ತು. ಇದರ ಬೆನ್ನಲ್ಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಸೈಬರ್ ಠಾಣೆಯ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಪರಮೇಶ್ವರ ಒಡೆತನದ ಸಿದ್ದಾರ್ಥ ಮೆಡಿಕಲ್‌ ಕಾಲೇಜಿನ ತರಗತಿಯಲ್ಲಿ ಎಲ್ಲ ಸಹ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರಾಧ್ಯಾಪಕ ಅಬ್ದುಲ್‌ ಅವರು ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರಾಧ್ಯಾಪಕನಿಗೆ ಥಳಿಸಿದ್ದರು. ಅಲ್ಲದೇ ವಿದ್ಯಾರ್ಥಿನಿಯೂ ಚಪ್ಪಲಿ ಏಟು ನೀಡಿದ್ದರು. ಈ ಘಟನೆಯ ಬಳಿಕ ಪರಮೇಶ್ವರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!