ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ನಕಲಿ ಆಯುರ್ವೇದ ಔಷಧಿ ಮಾರಾಟ ದಂಧೆ; ದೆಹಲಿ ವ್ಯಕ್ತಿ ಬಂಧನ

ಬಂಧಿತ ಆರೋಪಿಯನ್ನು ರಾಜೀವ್ ಖನ್ನಾ ಎಂದು ಗುರುತಿಸಲಾಗಿದ್ದು, ಆರೋಪಿ ಸುಮಾರು ಒಂದೂವರೆ ವರ್ಷಗಳಿಂದ ಈ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ನಕಲಿ ಬ್ರ್ಯಾಂಡಿಂಗ್ ಬಳಸಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕ ನಕಲಿ ತೂಕ ಇಳಿಸುವ ಪುಡಿ ಮತ್ತು ನಕಲಿ ಆಯುರ್ವೇದ ಔಷಧಿಗಳನ್ನು ತಯಾರಿಸಿ ಮಾರಾಟ ಮಾಡಿದ ಆರೋಪದ ಮೇಲೆ ದೆಹಲಿ ಮೂಲದ 56 ವರ್ಷದ ವ್ಯಕ್ತಿಯನ್ನು ಗುರುವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜೀವ್ ಖನ್ನಾ ಎಂದು ಗುರುತಿಸಲಾಗಿದ್ದು, ಆರೋಪಿ ಸುಮಾರು ಒಂದೂವರೆ ವರ್ಷಗಳಿಂದ ಈ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಈ ದಂಧೆ ನಡೆಸಲು ತಮ್ಮ ತಂದೆಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜೀವ್ ಖನ್ನಾ ಪುತ್ರರಾದ ಹಿಮಾಂಶು(29) ಮತ್ತು ಮನನ್ ಖನ್ನಾ(25) ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಆದರೆ ಇಬ್ಬರೂ ತಲೆಮರೆಸಿಕೊಂಡಿದ್ದಾರೆ.

ಈ ಸಂಬಂಧ ತುಮಕೂರು ಜಿಲ್ಲೆಯ ಯರಗುಂಟೆ ಗ್ರಾಮದಲ್ಲಿರುವ ಜೀನಿ ಕಂಪನಿಯ ಮಾಲೀಕರಾದ ಧನಲಕ್ಷ್ಮಿ ಅವರು ಆಗಸ್ಟ್ 14, 2025 ರಂದು ಕಳ್ಳಂಬೆಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ದೆಹಲಿಯ ಆರ್ ಕೆ ಟ್ರೇಡರ್ಸ್, ಜೀನಿ ಕಂಪನಿಯ ಟ್ರೇಡ್‌ಮಾರ್ಕ್ ಅನ್ನು ದುರುಪಯೋಗಪಡಿಸಿಕೊಂಡು ಅದೇ ಬ್ರಾಂಡ್ ಹೆಸರಿನಲ್ಲಿ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು.

ಇಂತಹ ನಕಲಿ ಉತ್ಪನ್ನಗಳ ಮಾರಾಟವು ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ದೂರಿನ ಆಧಾರದ ಮೇಲೆ, ಪೊಲೀಸರು ರಾಜೀವ್ ಖನ್ನಾ ವಿರುದ್ಧ ಭಾರತೀಯ ನ್ಯಾಯ ಸಂಹಿತದ ಸಂಬಂಧಿತ ಸೆಕ್ಷೆನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

"ತನಿಖೆಯ ಸಮಯದಲ್ಲಿ, ಪೊಲೀಸರು, ಆರೋಪಿ ನಕಲಿ ಉತ್ಪನ್ನಗಳನ್ನು ತಯಾರಿಸುತ್ತಿದ್ದ ಗೋದಾಮನ್ನು ಪತ್ತೆಹಚ್ಚಿದೆ. ಮಾರ್ಚ್ 27 ರಂದು, ನವದೆಹಲಿಯ ಶಾಲಿಮಾರ್ ಬಾಗ್ ಪ್ರದೇಶದ ಪಂಜಾಬಿ ಮೊಹಲ್ಲಾದಲ್ಲಿರುವ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದರು" ಎಂದು ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾಳಿಯ ಸಮಯದಲ್ಲಿ, ಪೊಲೀಸರು ನಕಲಿ ಜೀನಿ ಕಂಪನಿ ಉತ್ಪನ್ನಗಳು, ನಕಲಿ ಆಯುರ್ವೇದ ಮಾತ್ರೆಗಳು, ಸೌಂದರ್ಯ ಕ್ರೀಮ್‌ಗಳು ಮತ್ತು ಸಾರ್ವಜನಿಕರು ಸಾಮಾನ್ಯವಾಗಿ ಬಳಸುವ ಆಯುರ್ವೇದ ಪುಡಿಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಆರ್ ಕೆ ಟ್ರೇಡರ್ಸ್, ಎಂ ಕೆ ಟ್ರೇಡರ್ಸ್ ಮತ್ತು ಎಂಎಚ್‌ಕೆ ಟ್ರೇಡರ್ಸ್ ಮೂಲಕ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆಗಳು ಅಥವಾ ನಿಯಂತ್ರಕ ಅನುಮೋದನೆಗಳಿಲ್ಲದೆ ಈ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ