ನಮ್ಮ ಮೆಟ್ರೋ ಸಾಂದರ್ಭಿಕ ಚಿತ್ರ 
ರಾಜ್ಯ

Namma Metro: ಏಪ್ರಿಲ್ 5 ರಂದು ಈ ಮಾರ್ಗದಲ್ಲಿ ಮೆಟ್ರೋ ರೈಲು ಎರಡು ಗಂಟೆ ಸ್ಥಗಿತ! ಸಂಜೆ ಸೇವಾವಧಿ ವಿಸ್ತರಣೆ

ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು: ಏಪ್ರಿಲ್ 5 ರಂದು ನೇರಳ ಮಾರ್ಗದಲ್ಲಿ ಎರಡು ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಮೆಜಿಸ್ಟಿಕ್ ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್ 5 ರಂದು ಬೆಳಗ್ಗೆ ಎರಡು ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅಂದು ಬೆಳಗ್ಗೆ 7 ರಿಂದ 9ರವರೆಗೂ ತಾತ್ಕಾಲಿಕವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ, ಮೆಜೆಸ್ಟಿಕ್ ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ವೈಟ್ ಫೀಲ್ಡ್ ವರೆಗೆ ಎಂದಿನ ವೇಳಾಪಟ್ಟಿಯಂತೆ ಮೆಟ್ರೋ ರೈಲುಗಳು ಸಂಚರಿಸಲಿವೆ.

ಮಾದಾವರ- ರೇಷ್ಮೆ ಸಂಸ್ಥೆ ನಡುವಿನ ಹಸಿರು ಮಾರ್ಗ ಮತ್ತು ಆರ್. ವಿ. ರಸ್ತೆ -ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಗಳಲ್ಲಿ ಯಾವುದೇ ಬದಾವಣೆ ಇರುವುದಿಲ್ಲ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ರೈಲು ಸೇವಾವಧಿ ವಿಸ್ತರಣೆ:

ಏ. 5ನೇ ರಂದು ಮತ್ತೆ ಐಪಿಎಲ್ ಪಂದ್ಯ ಜರುಗಲಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ರೈಲು ಸೇವಾವಧಿಯನ್ನು ಬಿಎಂಆರ್ ಸಿಎಲ್ ವಿಸ್ತರಿಸಿದೆ. ಅಂದು ಮೆಟ್ರೋ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11:00 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2:00 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಎಲ್ಲ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲುಗಳು, 'ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 12.30ಕ್ಕೆ ಮತ್ತು ಚೆಲ್ಲಘಟ್ಟ ದಿಂದ ರಾತ್ರಿ 12.45 ಗಂಟೆಗೆ ಹೊರಡುತ್ತವೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರ ದಿಂದ ರಾತ್ರಿ 12.45 ಗಂಟೆಗೆ ಇನ್ನೂ ಬೊಮ್ಮಸಂದ್ರ ದಿಂದ ರಾತ್ರಿ 12.30 ಹಾಗೂ ಆರ್.ವಿ. ರಸ್ತೆ ಯಿಂದ ರಾತ್ರಿ 02.00ಕ್ಕೆ ಕೊನೆಯ ರೈಲು ಹೊರಡುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡತ್ತವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ