ರೇವು ನಾಯಕ್ ಬೆಳಮಗಿ ಮತ್ತು ಅನಿಲ್ ರಾಥೋಡ್ 
ರಾಜ್ಯ

ಕಲಬುರಗಿಯಲ್ಲಿ ಮಾಜಿ ಸಚಿವರ ಅಳಿಯನ ಬರ್ಬರ ಹತ್ಯೆ: ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಅನಿಲ್ ರಾಠೋಡ್ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ನೇರವಾಗಿ ಕಚೇರಿ ಒಳಗೆ ನುಗ್ಗಿದೆ.

ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯ ಪಿ ಅಂಡ್‌ ಟಿ ಕಾಲೊನಿಯಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಅನಿಲ್ ರಾಠೋಡ್ ಅವರು ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಕಚೇರಿಯಲ್ಲಿದ್ದಾಗ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ನೇರವಾಗಿ ಕಚೇರಿ ಒಳಗೆ ನುಗ್ಗಿದೆ. ಮಾರಕಾಸ್ತ್ರಗಳಿಂದ ಅನಿಲ್ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಹಂತಕರು ಅದೇ ಆಟೋದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಅನಿಲ ಅವರು ವಕೀಲಿಕೆ ಕಲಿತಿದ್ದರು. ಫೈನಾನ್ಸ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅನಿಲ ವರಸೆಯಲ್ಲಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನಾಗಬೇಕು. ಮೃತ ಅನಿಲ್ ರಾಠೋಡ್ ಅವರು ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರದಲ್ಲಿ ಸಕ್ರಿಯರಾಗಿದ್ದರು.

ಅವರ ಹತ್ಯೆಗೆ ಹಣಕಾಸಿನ ವಿಚಾರವೇ ಪ್ರಮುಖ ಕಾರಣವಿರಬಹುದು ಎಂದು ಪೊಲೀಸರು ಪ್ರಾಥಮಿಕವಾಗಿ ಶಂಕಿಸಿದ್ದಾರೆ. ವೈಯಕ್ತಿಕ ಅಥವಾ ವ್ಯವಹಾರಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT