ಸಮೀರ್ ಮುಲ್ಲಾ ಕಾಮಕಾಂಡ 
ರಾಜ್ಯ

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆಯಾಗಿದ್ದು ಆತನ ಕಾಮಕಾಂಡ ಬಯಲಿಗೆ ಬಂದಿದೆ. ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ...

ಹುಬ್ಬಳ್ಳಿ: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆಯಾಗಿದ್ದು ಆತನ ಕಾಮಕಾಂಡ ಬಯಲಿಗೆ ಬಂದಿದೆ. ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಸಮೀರ್ ಬೇರೆ ಬೇರೆ ಯುವತಿಯ ಜತೆ ಇದ್ದ ಫೋಟೋಗಳು ಪತ್ತೆಯಾಗಿವೆ. ಅಲ್ಲದೇ ಸ್ಕಾನಿಂಗ್ ವರದಿ ಹಾಗೂ ಗರ್ಭನಿರೋಧಕ ಮಾತ್ರೆ ಫೋಟೋ ಸಹ ಸಿಕ್ಕಿದೆ. ಇನ್ನು ಸಮೀರ್ ತನ್ನ ಅರೆಬೆತ್ತಲೆ ಫೋಟೋಗಳನ್ನ ಯುವತಿಯರಿಗೆ ಕಳುಹಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜಿಮ್ ತರಬೇತುದಾರನ ಮೇಲಿನ ಹಲ್ಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಪ್ರಕರಣದ ಸಂತ್ರಸ್ತ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡುವ ಪ್ರಕರಣಕ್ಕೆ ಟ್ವಿಸ್ಟ್ ನೀಡಿದ್ದಳು. ಅಜ್ಞಾತ ಸ್ಥಳದಿಂದ ಸಂತ್ರಸ್ತ ಯುವತಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ ಸಮೀರ್ ಮುಲ್ಲಾ ಮತ್ತು ಬರಿಸುವ ಪಾನೀಯ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ ಎಂದು ಆರೋಪಿಸಿದ್ದಾರೆ. ಜಿಮ್ ಗೆ ಬರುವ ಯುವತಿಯ ತಲೆ ಕಡೆಸಿ ಅವರ ಜೊತೆ ಖಾಸಗಿ ಕ್ಷಣಗಳನ್ನು ಕಳೆದು, ಅದನ್ನು ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಸಂತ್ರಸ್ತೆ ದೂರಿದ್ದಾರೆ.

ಲವ್‌ ಜಿಹಾದ್‌ ಪ್ರಕರಣ ತೀವ್ರಗೊಳ್ಳುತ್ತಿದ್ದಂತೆ 2 ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಒಂದೆಡೆ ಯುವಕನನ್ನ ಕಿಡ್ನ್ಯಾಪ್‌ ಮಾಡಲಾಗಿದೆ ಎಂದು ಯುವಕನ ಕುಟುಂಬಸ್ಥರು ಯುವತಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಮತ್ತೊಂದು ಗುಂಪು ಹುಬ್ಬಳ್ಳಿ ನಗರದ ವಿಕಾಸ ನಗರದಲ್ಲಿರೋ ಯುವತಿ ಮನೆ ಬಳಿ ಗಲಾಟೆ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಎರಡು ಕಡೆಯವರು ಕಿಮ್ಸ್‌ಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

'2ನೇ ಟೆಸ್ಟ್ ಪಂದ್ಯ ಕೂಡ ಶ್ರೀಲಂಕಾ ಕೈ ಜಾರಿ ಹೋಗಿದೆ': Harsha Bhogle ಹೇಳಿದ್ದೇನು?