ಎಂ ಲಕ್ಷ್ಣಣ್-ಕೆಎಚ್ ಮುನಿಯಪ್ಪ 
ರಾಜ್ಯ

ಕೇಂದ್ರವನ್ನ ಓಲೈಸೋದು ಬಿಟ್ಟು ಬಾಯಿ ಮುಚ್ಚಿಕೊಂಡಿರಿ: ಸಚಿವ ಮುನಿಯಪ್ಪ ವಿರುದ್ಧ KPCC ವಕ್ತಾರ ಲಕ್ಷ್ಮಣ್​​ ಗರಂ!

ಪಶ್ಚಿಮ-ಏಷ್ಯಾ ಯುದ್ಧದಿಂದಾಗಿ ತೈಲ ಆಮದಿನ ಮೇಲೆ ಭಾರೀ ಪರಿಣಾಮ ಬೀರಿದೆ. ಇನ್ನು ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್​​ ಗಾಗಿ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ KPCC ವಕ್ತಾರ ಎಂ.ಲಕ್ಷ್ಮಣ್​ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ: ಪಶ್ಚಿಮ-ಏಷ್ಯಾ ಯುದ್ಧದಿಂದಾಗಿ ತೈಲ ಆಮದಿನ ಮೇಲೆ ಭಾರೀ ಪರಿಣಾಮ ಬೀರಿದೆ. ಈ ಮಧ್ಯೆ ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್​​ ಗಾಗಿ ಗ್ರಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಿಲಿಂಡರ್ ಮತ್ತು ಆಟೋ ಗ್ಯಾಸ್ ಸಮಸ್ಯೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K.H. ಮುನಿಯಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಲ್ಪಿಜಿ ಸಿಲಿಂಡರ್ ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಈ ವಿಚಾರವಾಗಿ ಜನತೆಗೆ ಕೇಂದ್ರ ಸರ್ಕಾರ ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​​ ಆರೋಪಿಸಿದ್ದಾರೆ. ಆಟೋ ಗ್ಯಾಸ್ ಸಿಗದೆ ಆಟೋ ಚಾಲಕರು ಬಂಕ್​ಗಳಲ್ಲಿಯೇ ಮಲಗುವ ಪರಿಸ್ಥತಿ ನಿರ್ಮಾಣವಾಗಿದೆ. ನೀವು ಪದೇ ಪದೇ ಸಭೆಗಳನ್ನು ಮಾಡುತ್ತಿದ್ದರೇ ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿಯುತ್ತಾರೆ. ಅದು ರಾಜ್ಯ ಸರ್ಕಾರದ ಮೇಲೆ ವ್ಯತಿರೀಕ್ತ ಭಾವನೆ ಮೂಡುವಂತೆ ಮಾಡುತ್ತದೆ.

ನೀವು ಹಿರಿಯ ಸಚಿವರಾಗಿದ್ದು ಏಳು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಾ. ನೀವು ಪದೇ ಪದೇ ಅಧಿಕಾರಿಗಳ ಜೊತೆ ಸಭೆ ಮಾಡುವುದನ್ನು ಬಿಟ್ಟು ಬಾಯಿ ಮುಚ್ಚಿಕೊಂಡು ಇದ್ದರೆ ಚಂದ ಎಂದು ಲಕ್ಷ್ಮಣ್​​ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel