ಬಸ್ ಗಳು ಡಿಕ್ಕಿ ಹೊಡೆದಿರುವುದು. 
ರಾಜ್ಯ

ಶಿರಸಿ ಬಳಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, 40ಕ್ಕೂ ಹೆಚ್ಚು ಜನರಿಗೆ ಗಾಯ

ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಶಿರಸಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ.

ಕುಮಟಾ–ಶಿರಸಿ ಹೆದ್ದಾರಿಯ ಕೊಲಗಿಬೀಸ್ ಗ್ರಾಮದಲ್ಲಿ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿವೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕುಮಟಾದಿಂದ ಶಿರಸಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆ ಸ್ಥಳೀಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ, ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಭಾರೀ ಸದ್ದು ಕೇಳುತ್ತಿದ್ದಂತೆ ಸ್ಥಳೀಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳದಲ್ಲಿ ಗಾಯಗೊಂಡವರ ಗೋಳಾಟ, ಕಿರುಚಾಟ ಮತ್ತು ಸಹಾಯಕ್ಕಾಗಿ ಕೂಗುತ್ತಿರುವುದು ಕಂಡು ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ.

ಶಿರಸಿ ಪೊಲೀಸರು ಸ್ಥಳಕ್ಕೆ ತ್ವರಿತವಾಗಿ ತಲುಪಿ ಆಂಬ್ಯುಲೆನ್ಸ್‌ಗಳಿಗೆ ವ್ಯವಸ್ಥೆ ಮಾಡಿದರು ಎಂದು ಪ್ರತ್ಯಕ್ಷದರ್ಶಿ ಮಂಜುನಾಥ್ ನಾಯಕ್ ಅವರು ಹೇಳಿದ್ದಾರೆ.

ಈ ಅಪಘಾತದಿಂದ ಹೊಸದಾಗಿ ನಿರ್ಮಿತ ರಸ್ತೆಯಲ್ಲಿ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿ, ಹಲವು ಕಿಲೋಮೀಟರ್‌ಗಳಷ್ಟು ವಾಹನಗಳು ಸಾಲಾಗಿ ನಿಂತಿದ್ದವು. ನಂತರ ಅಪಘಾತಕ್ಕೀಡಾದ ಬಸ್‌ಗಳನ್ನು ರಸ್ತೆ ಬದಿಗೆ ಸರಿಸಲಾಯಿತು. ಬಳಿಕ ಸಂಚಾರ ಸುಗಮಗೊಂಡಿತು.

ಶಿರಸಿ ಉಪವಿಭಾಗ ಪೊಲೀಸ್ ಅಧಿಕಾರಿ ಗೀತಾ ಪಾಟೀಲ್ ಮಾಹಿತಿ ನೀಡಿ, “ಅಪಘಾತದ ನಿಖರ ಕಾರಣ ತನಿಖೆಯ ಬಳಿಕ ತಿಳಿಯಲಿದೆ. ವೇಗವೇ ಕಾರಣವಾಗಿರಬಹುದು ಎಂಬ ಅನುಮಾನವಿದೆ. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ