ಆರೋಪಿ ಸಮೀರ್ ಮುಲ್ಲಾ 
ರಾಜ್ಯ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ? Sameer Mulla ಸ್ಫೋಟಕ ಹೇಳಿಕೆ!

ಪ್ರಕರಣದ ಸಂತ್ರಸ್ಥ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಆರೋಪಿ ಸಮೀರ್ ಕೂಡ ಹೇಳಿಕೆ ಬಿಡುಗಡೆ ಮಾಡಿದ್ದಾನೆ.

ಹುಬ್ಬಳ್ಳಿ: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಆರೋಪಿ ಸಮೀರ್ ಮುಲ್ಲಾ ಮೊದಲ ಬಾರಿಗೆ ಪ್ರಕರಣದ ಕುರಿತು ಮಾತನಾಡಿದ್ದಾನೆ.

ಹೌದು.. ಹುಬ್ಬಳ್ಳಿಯಲ್ಲಿ ಜಿಮ್ ತರಬೇತುದಾರನ ಮೇಲಿನ ಹಲ್ಲೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಪ್ರಕರಣದ ಸಂತ್ರಸ್ಥ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಇದೀಗ ಆರೋಪಿ ಸಮೀರ್ ಕೂಡ ಹೇಳಿಕೆ ಬಿಡುಗಡೆ ಮಾಡಿದ್ದಾನೆ.

ತನ್ನ ವಿಡಿಯೋ ಹೇಳಿಕೆಯಲ್ಲಿ ಆರೋಪಿ ಸಮೀರ್ ತನ್ನ ಮೇಲಿನ ಎಲ್ಲ ಆರೋಪಗಳನ್ನು ಬಲವಾಗಿ ಅಲ್ಲಗಳೆದಿದ್ದಾನೆ. ಸಂತ್ರಸ್ಥೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಹೇಳಿರುವ ಸಮೀರ್, ವಿಡಿಯೋ ಬಗ್ಗೆಯೂ ಮಾತನಾಡಿದ್ದಾನೆ.

ಪ್ರಕರಣದ ಮಧ್ಯೆ ವೈರಲ್ ಆಗಿರುವ ವಿಡಿಯೋದ ಬಗ್ಗೆ ಮಾತನಾಡಿದ ಸಮೀರ್, ವಿಡಿಯೋ ರೆಕಾರ್ಡ್ ಆಗಿರುವುದು ನಿಜ. ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ. ಅದು ಇರುವುದು ಹುಡುಗಿಯ ಮೊಬೈಲ್ ನಲ್ಲೇ ಎಂದು ಸಮೀರ್ ಸ್ಪಷ್ಟಪಡಿಸಿದ್ದಾನೆ.

ಈ ವಿಡಿಯೋವನ್ನು ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಲು ತನ್ನ ಮತ್ತು ಆರೋಪಿಯಾದ ಹುಡುಗಿಯ ಮೊಬೈಲ್ ಫೋನ್‌ಗಳನ್ನು ಪರಿಶೀಲಿಸುವಂತೆ ಸಮೀರ್ ಆಗ್ರಹಿಸಿದ್ದಾನೆ.

ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?

ಇದೇ ವೇಳೆ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ನೀಡಿದ್ದರೆ, ಹುಡುಗಿ ಪ್ರಜ್ಞೆ ಕಳೆದುಕೊಳ್ಳಬೇಕಿತ್ತು. ಆದರೆ, ನಿಜವಾಗಿ ಪ್ರಜ್ಞೆ ಕಳೆದುಕೊಂಡಿದ್ದು ನಾನೇ, ಹುಡುಗಿಯಲ್ಲ ಎಂದು ಸಮೀರ್ ಹೇಳಿಕೆ ನೀಡಿದ್ದಾನೆ. ವಿಡಿಯೋವನ್ನು ಆ ಹುಡುಗಿಯೇ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿರುವುದಾಗಿ ಸಮೀರ್ ಆರೋಪಿಸಿದ್ದಾನೆ.

ಒತ್ತಡಕ್ಕೆ ಒಳಗಾಗಿ ನನ್ನ ವಿರುದ್ಧ ಹೇಳಿಕೆ

ಇದೇ ವೇಳೆ ಸಮೀರ್ ಆಕೆ ತನ್ನ ಪೋಷಕರು ಮತ್ತು ಸಮಾಜದ ಒತ್ತಡಕ್ಕೆ ಒಳಗಾಗಿ ನನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾಳೆ. ಮೊದಲು ವಿಡಿಯೋ ಯಾರ ಮೊಬೈಲ್ ನಲ್ಲಿದೆ.. ಯಾರು ಪ್ರಜ್ಞೆ ತಪ್ಪಿ ಮಲಗಿದ್ದಾರೆ.. ಯಾರು ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಿ ಎಂದು ಸಮೀರ್ ಹೇಳಿಕೆ ನೀಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT