ಕೆಎಸ್ ಆರ್ ಟಿಸಿ ಬಸ್ ಸಾಂದರ್ಭಿಕ ಚಿತ್ರ 
ರಾಜ್ಯ

ಬಾಕಿ ವೇತನಕ್ಕಾಗಿ ಪ್ರತಿಭಟನೆ: ಚಿತ್ರದುರ್ಗದಿಂದ ಬೆಂಗಳೂರಿಗೆ KSRTC ಸಿಬ್ಬಂದಿ ಪಾದಯಾತ್ರೆ!

ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಪದೇ ಪದೇ ಭರವಸೆ ನೀಡಿದ್ದರೂ ದೀರ್ಘಾವಧಿಯ ವಿಳಂಬದ ಕಾರಣ ಹಂತ ಹಂತವಾಗಿ ವೇತನ ಪಾವತಿಯನ್ನು ತಿರಸ್ಕರಿಸಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ನಾಳೆ ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಿದ್ದಾರೆ.

ಜನವರಿ 1, 2024 ರಿಂದ 7 ನೇ ವೇತನ ಆಯೋಗದ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಸಮಾನವಾದ ವೇತನವನ್ನು ಜಾರಿಗೊಳಿಸುವುದು, 38 ತಿಂಗಳ ಬಾಕಿ ವೇತನ ಪಾವತಿ ಮತ್ತು ಕಾರ್ಮಿಕ ಸಂಘಟನೆಗಳ ಮಾನ್ಯತೆಗಾಗಿ ತಕ್ಷಣವೇ ಯೂನಿಯನ್ ಚುನಾವಣೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕಳೆದ ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಪದೇ ಪದೇ ಭರವಸೆ ನೀಡಿದ್ದರೂ ದೀರ್ಘಾವಧಿಯ ವಿಳಂಬದ ಕಾರಣ ಹಂತ ಹಂತವಾಗಿ ವೇತನ ಪಾವತಿಯನ್ನು ತಿರಸ್ಕರಿಸಿದ್ದಾರೆ.

ಬುಧವಾರ ಚಿತ್ರದುರ್ಗದಿಂದ ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲಿದ್ದಾರೆ. ಮಾರ್ಚ್ 21 ರಂದು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶಗೊಳ್ಳಲು ನಿರ್ಧರಿಸಲಾಗಿದ್ದು, ಅಲ್ಲಿ ಒಕ್ಕೂಟಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸಲು ಯೋಜಿಸಿವೆ. ನಾಲ್ಕು ನಿಗಮಗಳಿಂದ ಸುಮಾರು 1.15 ಲಕ್ಷ ಉದ್ಯೋಗಿಗಳನ್ನು ಈ ಯೂನಿಯನ್ ಪ್ರತಿನಿಧಿಸಲಿದ್ದು, ಒಟ್ಟಾರೆಯಾಗಿ ಪ್ರತಿದಿನ ಒಂದು ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಆರ್ ಟಿಸಿ ಎಂಪ್ಲಾಯೀಸ್ ಲೀಗ್ ರಾಜ್ಯಾಧ್ಯಕ್ಷ ಆರ್. ಚಂದ್ರಶೇಖರ್, ಕಳೆದ ಮೂರು ವರ್ಷಗಳಿಂದ ಸರ್ಕಾರ ಹಲವು ಬಾರಿ ಸಭೆ ನಡೆಸಿದ್ದರೂ ತಮ್ಮ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರ ಇಲ್ಲಿಯವರೆಗೂ ನಮ್ಮ ಬೇಡಿಕೆ ಈಡೇರಿಸುವ ಬದಲು ಕೇವಲ ಮಾತುಕತೆಯಲ್ಲಿ ನಿರತವಾಗಿದೆ. ಸೋಮವಾರ ಎಲ್ಲಾ ನಾಲ್ಗು ನಿಗಮಗಳ ವ್ಯವಸ್ಥಾಪಕರು ನಡೆಸಿದ ಸಭೆಯಲ್ಲಿ ಶೇ.5 ರಷ್ಟು DA ಹೆಚ್ಚಿಸುವ ಆಫರ್ ನೀಡಿದ್ದಾರೆ ಎಂದು ತಿಳಿಸಿದರು.

TNIE ಯೊಂದಿಗೆ ಮಾತನಾಡಿದ KSRTC ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್, ನೌಕರರ ಬಡ್ತಿ ಮತ್ತು ವರ್ಗಾವಣೆಯ ಮೇಲೆ ಪರಿಣಾಮ ಬೀರುತ್ತಿರುವ ಸುಮಾರು 32,000 ರಿಂದ 33,000 ಬಾಕಿ ಇರುವ ಶಿಸ್ತಿನ ಪ್ರಕರಣಗಳನ್ನು ಪರಿಹರಿಸಲು ಆಡಳಿತವು ಭರವಸೆ ನೀಡಿರುವುದು ಸಭೆಯ ಪ್ರಮುಖ ಅಂಶವಾಗಿದೆ. ವೃತ್ತಿ ಪ್ರಗತಿಗೆ ಅನುಕೂಲವಾಗುವಂತೆ ಈ ಪ್ರಕರಣಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಏಪ್ರಿಲ್ 17 ರಂದು ನಡೆಯಲಿರುವ ಮುಂದಿನ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮುಂದುವರಿಯುತ್ತದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'.. ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್‌ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ, ಮಾಧ್ಯಮಗಳಿಗೆ ಬೆದರಿಕೆ!

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯಾದ್ಯಂತ ಎಂಟು ಕಡೆ ರೇಡ್; ಕೋಟಿ ಕೋಟಿ ಆಸ್ತಿ ಪತ್ತೆ!

ವಾಹನ ಸವಾರರ ಗಮನಕ್ಕೆ; ಏಪ್ರಿಲ್ 10 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ!

'ಕಿಡ್ನಿ ಕೊಡು ಇಲ್ಲ.. 30 ಲಕ್ಷ ರೂ ಹಣ ಕೊಡು': ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆ!

SCROLL FOR NEXT