ಬೆಳಗಾವಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ 
ರಾಜ್ಯ

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯಾದ್ಯಂತ ಎಂಟು ಕಡೆ ರೇಡ್; ಕೋಟಿ ಕೋಟಿ ಆಸ್ತಿ ಪತ್ತೆ!

ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ವಿವಿಧ ಇಲಾಖೆ ಹಾಗೂ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ಎಂಟು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದು, ರಾಜ್ಯಾದ್ಯಂತ ಎಂಟು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಮೂಲಗಳ ಪ್ರಕಾರ, ಕೊಡಗು, ಬೀದರ್, ಬಳ್ಳಾರಿ, ಚಿತ್ರದುರ್ಗ ಮತ್ತು ಮೈಸೂರು ಸೇರಿದಂತೆ ವಿವಿಧ ಇಲಾಖೆ ಹಾಗೂ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕನಿಷ್ಠ ಎಂಟು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಲಾಗಿದೆ.

ಕೊಡಗು ಜಿಲ್ಲೆಯ ಹಾರಂಗಿ ಅಣೆಕಟ್ಟು ಉಪವಿಭಾಗದಲ್ಲಿ ನಿಯೋಜಿಸಲಾದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಐ ಕೆ ಪುಟ್ಟಸ್ವಾಮಿ ಅವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಚಿತ್ರದುರ್ಗ (Chitradurga) ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಶೀಲಮ್ಮರ ಮೆದೇಹಳ್ಳಿ ರಸ್ತೆ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ (Illegal Acquisition of Property) ಹಿನ್ನೆಲೆಯಲ್ಲಿ ಲೋಕಾಯುಕ್ತ SP ವಾಸುದೇವ್ ರಾಮ್ ಹಾಗೂ DYSP ಮೃತ್ಯುಂಜಯ ನೇತೃತ್ವದಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಬಳ್ಳಾರಿಯಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೀನುಗಾರಿಕ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಬಳ್ಳಾರಿ ನಗರದ ಸಿದ್ಧಾರ್ಥ್ ನಗರದಲ್ಲಿರುವ ಮನೆ ಸೇರಿದಂತೆ ಒಟ್ಟು ನಾಲ್ಕು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಬಗ್ಗೆ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಶಿವಣ್ಣ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡ್ತಿದ್ದಾರೆ.

ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.

ಶಿಕಾರಿಪುರ ಬಳಿ ತರಲಘಟ್ಟ ನಿವಾಸ, ಸಾಗರ ತಾಲೂಕಿನ ಆನಂದಪುರ ಬಳಿ ಆಚಾಪುರ ಶಾಲೆ-ಕಚೇರಿ ಹಾಗೂ ಚಾಲುಕ್ಯ ನಗರದ ರಾಘವೇಂದ್ರ ಅವರ ನಿವಾಸ ಸೇರಿ 3-4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಗಳಿಸಿದ ದೂರಿನ ಮೇರೆಗೆ ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಕಚೇರಿ ಹಾಗೂ ನಿವಾಸಗಳಲ್ಲಿ ಆದಾಯ-ಆಸ್ತಿ ವಿವರಗಳು, ಬ್ಯಾಂಕ್ ದಾಖಲೆಗಳು, ಖರೀದಿ-ಮಾರಾಟ ಪತ್ರಗಳನ್ನು ಅಧಿಕಾರಿಗಳು ತೀವ್ರವಾಗಿ ಪರಿಶೀಲಿಸುತ್ತಿವೆ. ಶೋಭಾ ಅವರ ವಿರುದ್ಧ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ಇನ್ನೂ ಗಂಭೀರವಾಗಿ ನಡೆಯುತ್ತಿದೆ.

ಇನ್ನು ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಅಜಯ್ ಸಿಂಗ್ ರಜಪೂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಬೆಳಗಾವಿ ಆಂಜನೇಯ ನಗರ, ಅಥಣಿ ಹಾಗೂ ಹುಕ್ಕೇರಿ ಸೇರಿದಂತೆ ಮೂರು ಸ್ಥಳಗಳಲ್ಲಿಯೂ ಏಕಕಾಲದಲ್ಲಿ ದಾಳಿ ನಡೆದಿದೆ.

ದಾಳಿ ವೇಳೆ ಒಂದು ಕೆಜಿ ಚಿನ್ನಾಭರಣಗಳು ಪತ್ತೆಯಾಗಿವೆ. ಬ್ಯಾಂಕ್‌ನಲ್ಲಿ ಎರಡು ಕೋಟಿ ರೂಪಾಯಿ ಠೇವಣಿ ಪತ್ತೆಯಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಡಿವೈಎಸ್ಪಿ ಬಿ.ಎಸ್. ಪಾಟೀಲ್ ಮತ್ತು ಭರತ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಜಯ್ ಸಿಂಗ್ ನಗರದಲ್ಲೇ ಅಕ್ಕಪಕ್ಕದಲ್ಲಿ ಮೂರು ಮನೆಗಳನ್ನು ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಾಯುಕ್ತ ಪೊಲೀಸರು ಮಂಡ್ಯ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ವಿರುದ್ಧ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ.

ಮೈಸೂರಿನ ಕಚೇರಿ ಹಾಗೂ ಮಂಡ್ಯದ ಎರಡು ನಿವಾಸಗಳಲ್ಲಿ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಡಿ‌ಎಸ್‌ಪಿ ಶೈಲೇಂದ್ರ ಮತ್ತು ವೆಂಕಟೇಶ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಶಶಿಕುಮಾರ್ ಸೇರಿದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ಸದ್ಯ ಅಧಿಕಾರಿಗಳು ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಕ್ಕಳ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ CRPF ಫೈರಿಂಗ್; ಇಬ್ಬರು ಸಾವು, 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

'ನಾನು ಸೇರಿದಂತೆ 14 ಮಿಲಿಯನ್ ಇರಾನಿಯನ್ನರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧ- ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್!

ಜಯಮೃತ್ಯುಂಜಯ ಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅವರು ಸ್ವಾಮೀಜಿಗಳಾಗಿ ಉಳಿದಿಲ್ಲ; ಕಾಶಪ್ಪನವರ್ ಕಿಡಿ

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'.. ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್‌ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ, ಮಾಧ್ಯಮಗಳಿಗೆ ಬೆದರಿಕೆ!

SCROLL FOR NEXT