ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ವೆಬ್‌ಸೈಟ್‌ಗಿಂತಲೂ ಮೊದಲೇ ರಿಸಲ್ಟ್​ ನೋಡುವುದು ಹೇಗೆ?

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್​​ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶ​ ನೋಡಬಹುದಾಗಿದೆ.

ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಲಕ್ಷಾಂತರ ವಿದ್ಯಾರ್ಥಿಗಳು ಒಮ್ಮೆಗೆ ಅಧಿಕೃತ ವೆಬ್‌ಸೈಟ್‌ಗಳ ಮೇಲೆ ಮುಗಿಬೀಳುತ್ತಾರೆ. ಇದರಿಂದ ಸರ್ವರ್ ಸಮಸ್ಯೆ ಅಥವಾ ಪೇಜ್ ಲೋಡ್ ಆಗಲು ಬಹಳ ಸಮಯ ತೆಗೆದುಕೊಳ್ಳುವುದು ಮಾಮೂಲಿ. ಆದರೆ ಈ ಬಾರಿ ನೀವು ವೆಬ್‌ಸೈಟ್ ಓಪನ್ ಆಗುವವರೆಗೆ ಕಾಯಬೇಕಾದ ಅಗತ್ಯವಿಲ್ಲ. ಡಿಜಿಲಾಕರ್ ಮೂಲಕವೇ ನೇರವಾಗಿ ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಂಡು ನಿಮ್ಮ ಫಲಿತಾಂಶ ಪಡೆಯಬಹುದು.

ವೆಬ್‌ಸೈಟ್‌ಗಿಂತಲೂ ವೇಗವಾಗಿ ಮತ್ತು ಸುಲಭವಾಗಿ ನಿಮ್ಮ ಅಂಕಪಟ್ಟಿ ಪಡೆಯಲು ನಿಮ್ಮ ಮೊಬೈಲ್ ನಲ್ಲಿ ‘DigiLocker’ ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್ ಇಲ್ಲದಿದ್ದರೆ ನೇರವಾಗಿ digilocker.gov.in ವೆಬ್‌ಸೈಟ್‌ಗೂ ಭೇಟಿ ನೀಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್