ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಪ್ರವಾಸಕ್ಕೆ ತೆರಳಿದ್ದ ಮುಸ್ಲಿಂ ಕುಟುಂಬ; ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು!

ವಿಜಯಪುರದ ಐತಿಹಾಸಿಕ ಸ್ಥಳಗಳನ್ನು ನೋಡಲು ಬೆಂಗಳೂರಿನ ಆರ್.ಟಿ. ನಗರದಿಂದ 14 ಜನರ ತಂಡ ಪ್ರವಾಸಕ್ಕೆ ತೆರಲಿದ್ದು ಈ ವೇಳೆ ಪ್ರಸಿದ್ಧ ಭೂತನಾಳ ಕೆರೆಯಲ್ಲಿ ಈಜಲು ಹೋದ ಮೂವರು ದುರಂತ ಅಂತ್ಯ ಕಂಡಿದ್ದಾರೆ.

ವಿಜಯಪುರ: ವಿಜಯಪುರದ ಐತಿಹಾಸಿಕ ಸ್ಥಳಗಳನ್ನು ನೋಡಲು ಬೆಂಗಳೂರಿನ ಆರ್.ಟಿ. ನಗರದಿಂದ 14 ಜನರ ತಂಡ ಪ್ರವಾಸಕ್ಕೆ ತೆರಲಿದ್ದು ಈ ವೇಳೆ ಪ್ರಸಿದ್ಧ ಭೂತನಾಳ ಕೆರೆಯಲ್ಲಿ ಈಜಲು ಹೋದ ಮೂವರು ದುರಂತ ಅಂತ್ಯ ಕಂಡಿದ್ದಾರೆ. 12 ವರ್ಷದ ಬಾಲಕ ಮೊಹಮದ್ ಹಯಾತ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ಬಾಲಕನ್ನು ರಕ್ಷಿಸುವ ಸಲುವಾಗಿ ಮತ್ತಿಬ್ಬರು ಯುವಕರು ಕೆರೆಗೆ ಇಳಿದಿದ್ದು ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಮೊಹಮ್ಮದ್ ಹಯಾತ್, ಹೈದರ್ ಪಾಷಾ ಮತ್ತು ಅಬ್ದುಲ್ ಖದ್ದೂಸ್ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಮೂವರ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು