ಮಾಜಿ ಸಚಿವ ವಿನಯ್ ಕುಲಕರ್ಣಿ 
ರಾಜ್ಯ

ನಾಳೆ ಯೋಗೇಶ್‌ ಗೌಡ ಕೊಲೆ ಪ್ರಕರಣದ ತೀರ್ಪು: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

2016ರ ಜೂನ್ 15 ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ತೀರ್ಪು ಪ್ರಕಟಿಸಲಿದೆ.

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಧಾರವಾಡ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಗುರುವಾರ ನಿರ್ಧಾರವಾಗಲಿದೆ.

2016ರ ಜೂನ್ 15 ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ತೀರ್ಪು ಪ್ರಕಟಿಸಲಿದೆ.

ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 9ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ತೀರ್ಪು ಪ್ರಕಟಣೆ ದಿನ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಸೆಪ್ಟೆಂಬರ್ 2019 ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು.

ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ