ಶಾಸಕ ವಿನಯ್ ಕುಲಕರ್ಣಿ  
ರಾಜ್ಯ

ಯೋಗೇಶ್ ಗೌಡ ಕೊಲೆ ಪ್ರಕರಣ: ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆ

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿದೆ.

ಧಾರವಾಡ: ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪು ಮುಂದೂಡಿಕೆ ಮಾಡಲಾಗಿದೆ.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿದೆ. ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಕೋರ್ಟ್‌ಗೆ ತೆರಳುವ ಮೊದಲು ಪ್ರತಿಕ್ರಿಯಿಸಿದ ವಿನಯ್‌ ಕುಲಕರ್ಣಿ, ದೇವರ ಮೇಲೆ ಭರವಸೆ ಇದೆ. ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ . ಕೋರ್ಟ್ ಮೇಲೆ ಭರವಸೆ ಇದೆ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಕೋರ್ಟ್ ತೀರ್ಪು ಪ್ರಕಟಿಸಲಿ ಎಂದು ತಿಳಿಸಿದ್ದರು.

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ