ಸಾಂದರ್ಭಿಕ ಚಿತ್ರ 
ರಾಜ್ಯ

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ: ಉತ್ತರ ಪತ್ರಿಕೆ ಸ್ಕ್ಯಾ‌ನ್‌ ಪ್ರತಿ, ಮರುಮೌಲ್ಯಮಾಪನ, ಪಿಯುಸಿ ಪರೀಕ್ಷೆ-2 ನೋಂದಣಿಗೆ ದಿನಾಂಕ ನಿಗದಿ

ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರು: ಪ್ರತಿ ವರ್ಷದಂತೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಟಾಪ್‌ ಎರಡೂ ಸ್ಥಾನಗಳನ್ನೂ ಹೆಣ್ಣು ಮಕ್ಕಳೇ ಪಡೆದುಕೊಂಡಿದ್ದಾರೆ. ಈ ಬಾರಿ ಗ್ರಾಮೀಣ ಪ್ರದೇಶದ ಫಲಿತಾಂಶದ ಜತೆಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಮಕ್ಕಳೂ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಪಿಯು ಪರೀಕ್ಷೆ ಎದುರಿಸಿದ 3,53,742 ವಿದ್ಯಾರ್ಥಿನಿಯರ ಪೈಕಿ 3,13,770 ಮಂದಿ ಪಾಸಾಗಿದ್ದು, ಶೇ.88.70ರಷ್ಟು ಫಲಿತಾಂಶ ದಾಖಲಾಗಿದೆ. ಇನ್ನು ಉತ್ತರ ಪತ್ರಿಕೆಯ ಸ್ಕ್ಯಾ‌ನ್‌ ಪ್ರತಿ, ಹಾಗೂ ಮರುಮೌಲ್ಯಮಾಪನಕ್ಕೆ ದಿನಾಂಕ ಸಹ ಬಿಡುಗಡೆಯಾಗಿದೆ. ಇದರ ಜೊತೆಗೆ ಪಿಯುಸಿ ಪರೀಕ್ಷೆ-2ಕ್ಕೆ ನೊಂದಣಿಗೂ ಏ.17ರವರೆಗೂ ಸಮಯ ನೀಡಲಾಗಿದೆ.

ಸ್ಕ್ಯಾ‌ನ್‌ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ

ದ್ವಿತೀಯ ಪಿಯುಸಿ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶ ಪಟ್ಟಿಯನ್ನು ಪರೀಕ್ಷಾ ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು ನೋಡಿದ ವಿದ್ಯಾರ್ಥಿಗಳು ಸ್ಕ್ಯಾ‌ನ್‌ ಪ್ರತಿ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆಯ ಸ್ಕ್ಯಾ‌ನ್‌ ಪ್ರತಿಗೆ ಏ.11ರಿಂದ ಮೇ 24ವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾ‌ನ್‌ ಪ್ರತಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಮೇ. 17ರವರೆಗೆ ಸಮಯವಿರಲಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏ. 13ರಿಂದ ಮೇ 19ವರೆಗೆ ಸಮಯ ನೀಡಲಾಗಿದೆ. ಸ್ಕ್ಯಾ‌ನ್‌ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಮತ್ತು ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1650 ರೂ. ಪಾವತಿಸಬೇಕಿದೆ.

ಪರೀಕ್ಷೆ-2ಕ್ಕೆ ನೋಂದಣಿ ಆರಂಭ

ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಅಪೂರ್ಣ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಪರೀಕ್ಷಾ ತಂತ್ರಾಂಶದಲ್ಲಿ ನೋಂದಣಿ ಮಾಡಲು ಏ.17ರವರೆಗೆ ಸಮಯ ನೀಡಲಾಗಿದೆ. ಪರೀಕ್ಷೆ-2ಕ್ಕೆ ಸಲ್ಲಿಸಲು ಮರುಮೌಲ್ಯಮಾಪನದ ಫಲಿತಾಂಶಕ್ಕೆ ಕಾಯಬೇಕಾಗಿಲ್ಲ. ಪರೀಕ್ಷೆ ನೋಂದಣಿ, ಮರು ಮೌಲ್ಯಮಾಪನ ಸೇರಿ ಇನ್ನಿತರೆ ವಿಷಯಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು 080 23310075/76 ಸಂಖ್ಯೆಗೆ ಕರೆ ಮಾಡಿ ತಮ್ಮ ಗೊಂದಲ ಬಗೆಹರಿಸಿಕೊಳ್ಳಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!