ಹೈಕೋರ್ಟ್ 
ರಾಜ್ಯ

SSLCಯಲ್ಲಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ದಂಡ ವಿಧಿಸಿದ ಹೈಕೋರ್ಟ್

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಬೆಂಗಳೂರು: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ದಂಡ ವಿಧಿಸಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.

SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ