ಕೇರಳ ಮೂಲದ ಬಾಲಕಿ ಶ್ರೀನಂದ  
ರಾಜ್ಯ

ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದ ತಪ್ಪಲಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶವವಾಗಿ ಪತ್ತೆ

ಮೊನ್ನೆ ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು.

ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15ವ) ಶವ ಪತ್ತೆಯಾಗಿದೆ.ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. 2000 ಅಡಿ ಆಳ ಮಾಣಿಕ್ಯಧಾರಾದಲ್ಲಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಪಾಲಕ್ಕಾಡ್ ಮೂಲದ ಅಪ್ರಾಪ್ತ ಬಾಲಕಿ‌ ಶ್ರೀನಂದಾ ನಾಪತ್ತೆಯಾಗಿ ಮೂರು ದಿನವಾಗಿತ್ತು.

ಮೊನ್ನೆ ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು.

41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಇದೀಗ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು.

ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ANF, SDRF, ಪೊಲೀಸ್, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಶೋಧ ಕಾರ್ಯ ನಡೆಸಿತು. ದುರಂತ ಎನ್ನುವಂತೆ ಇಂದು ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಶತಾವಧಾನಿ ಆರ್. ಗಣೇಶ್, ಅಂಕೇ ಗೌಡ, ಸುಶೀಲಮ್ಮಗೆ ಪದ್ಮ ಪ್ರಶಸ್ತಿ ಪ್ರದಾನ

ಕಾರ್ಮಿಕರಿಗೆ ಕನಿಷ್ಠ ವೇತನ ಪರಿಷ್ಕರಣೆ: ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆಗಳಲ್ಲಿ ದುಪ್ಪಟ್ಟು ಹೆಚ್ಚಳದ ವಾರ್ನಿಂಗ್!

T20ಯಲ್ಲಿ 200 ರನ್ ಬಾರಿಸುವ ಮೂಲಕ ಗೇಲ್ ದಾಖಲೆ ಮುರಿಯುವುದು ನನ್ನ ಗುರಿ: ವೈಭವ್ ಸೂರ್ಯವಂಶಿ

SCROLL FOR NEXT