ಮಧು ಬಂಗಾರಪ್ಪ  
ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಮಕ್ಕಳಿಗೆ ಡಿಜಿಟಲ್ ಅಂಕಪಟ್ಟಿ: ಸಚಿವ ಮಧು ಬಂಗಾರಪ್ಪ

ನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್‌ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್‌ ಅಂಕಪಟ್ಟಿ ಮಾತ್ರವೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್‌ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಅದರ ಜೊತೆಗೆ ಈ ವರ್ಷದ ಮಟ್ಟಿಗೆ ಮುದ್ರಿತ ಅಂಕಪಟ್ಟಿಯನ್ನು ನೀಡಲಾಗುವುದು. ಆದರೆ, ಮುಂದಿನ ಸಾಲಿನಿಂದ ಸಂಪೂರ್ಣ ಡಿಜಿಟಲ್‌ ಅಂಕಪಟ್ಟಿಯನ್ನು ಮಾತ್ರ ನೀಡಲಾಗುವುದು. ಇದರಿಂದ ಸರ್ಕಾರಕ್ಕೆ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದರು.

ಐತಿಹಾಸಿಕ ಫಲಿತಾಂಶ

ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಐತಿಹಾಸಿಕ ಫಲಿತಾಂಶ ಬರಲು ಕಷ್ಟಪಟ್ಟು ವ್ಯಾಸಂಗ ಮಾಡಿದ ಎಲ್ಲಾ ವಿದ್ಯಾರ್ಥಿಗಳು, ಅವರಿಗೆ ಸಹಕಾರ ನೀಡಿದ ಶಿಕ್ಷಕರು, ಪೊಷಕರು ಹಾಗೂ ನಮ್ಮ ಮಂಡಳಿ ಅಧಿಕಾರಿಗಳು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ಫಲಿತಾಂಶ ಇನ್ನಷ್ಟು ಉತ್ತಮಗೊಳ್ಳುವ ವಿಶ್ವಾಸವಿದೆ. ಅದಕ್ಕಾಗಿ ನಮ್ಮ ಸರ್ಕಾರ ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಯುದ್ಧ 3ನೇ ತಿಂಗಳಿಗೆ ಕಾಲಿಡುತ್ತಿರುವುದರಿಂದ '3F' ಮೇಲೆ ನಿಗಾ ವಹಿಸುವಂತೆ ಕೇಂದ್ರ ಸಚಿವೆ ಸೀತಾರಾಮನ್ ಕರೆ

'ಡಿಜಿಟಲ್ ಅರೆಸ್ಟ್': 24 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ನಿವೃತ್ತ ಶಿಕ್ಷಕಿ; ವಿವಿಧ ರಾಜ್ಯಗಳ ಆರು ಜನರ ಬಂಧನ!

Love, Marriage, Disputes: ಆನ್ ಲೈನ್ ಜ್ಯೋತಿಷ್ಯ ಹಗರಣ, 60,00,000 ಕ್ಕೂ ಅಧಿಕ ಹಣ ಲೂಟಿ! ಖತರ್ನಾಕ್ ಗ್ಯಾಂಗ್ ಬಂಧನ

'ಇಂದೇ ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ': ಪವರ್​ ಶೇರಿಂಗ್​ ನಡುವೆಯೇ DCM ಬಿಗ್ ಸಂದೇಶ

SCROLL FOR NEXT