ವೈರಲ್ ಆಗಿರುವ ವಿಡಿಯೋದಲ್ಲಿರುವ ವ್ಯಕ್ತಿ ಹಾಗೂ ಪೊಲೀಸ್ ಆಯುಕ್ತ 
ರಾಜ್ಯ

ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಆತಂಕ: ವೈರಲ್ ವೀಡಿಯೋ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ; ಹೇಳಿದ್ದೇನು..?

ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.

ಬೆಂಗಳೂರು: ನಗರದಲ್ಲಿ ‘ಝೋಂಬಿ ಡ್ರಗ್’ ಬಳಕೆ ಆರಂಭವಾಗಿದೆ ಎಂಬ ಆತಂಕ ಹುಟ್ಟಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.

ಕೆಲವರು ಇದನ್ನು ಜೈಲಜೈನ್ (xylazine) ಎಂಬ ಮದ್ದು ಹಾಗೂ ಇತರ ಡ್ರಗ್ಸ್ ಪ್ರಭಾವ ಎಂದು ಹೇಳಿ ಹಂಚಿಕೊಂಡಿದ್ದರು. ಇದರ ಪರಿಣಾಮವಾಗಿ ನಗರದಲ್ಲಿ ಹೊಸ ರೀತಿಯ ಅಪಾಯಕಾರಿ ಡ್ರಗ್ ಪ್ರವೇಶಿಸಿದೆ ಎಂಬ ವದಂತಿ ಹರಡಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಈಶಾನ್ಯ ವಿಭಾಗದ ಪೊಲೀಸರು, ತಕ್ಷಣ ತನಿಖೆ ಆರಂಭಿಸಿ, ವೀಡಿಯೋದಲ್ಲಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿದರು.

ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಯಾವುದೇ ರೀತಿಯ ಮಾದಕ ಪದಾರ್ಥಗಳು ಅಥವಾ ಡ್ರಗ್ಸ್ ಅವನ ದೇಹದಲ್ಲಿ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಈ ಕುರಿತು ಸ್ಪಷ್ಟನೆ ನೀಡಿ, “ಆ ವ್ಯಕ್ತಿ ಬೆಂಗಳೂರಿನವನು ಅಲ್ಲ. ಹೊರ ರಾಜ್ಯದಿಂದ ಬಂದಿದ್ದ ಆತ ಕೆಲವು ಆರೋಗ್ಯ ಸಮಸ್ಯೆಗಳಿಗಾಗಿ ಔಷಧಿಗಳನ್ನು ಸೇವಿಸಿದ್ದ. ಅದರ ಜೊತೆಗೆ ಸ್ವಲ್ಪ ಪ್ರಮಾಣದ ಮದ್ಯ ಸೇವಿಸಿದ್ದರಿಂದ ದೇಹದ ಸಮತೋಲನ ಕಳೆದುಕೊಂಡು ವಿಚಿತ್ರವಾಗಿ ವರ್ತಿಸಿದ್ದಾನೆ. ಇದಕ್ಕೆ ಡ್ರಗ್ಸ್‌ಗೆ ಯಾವುದೇ ಸಂಬಂಧ ಇಲ್ಲ,” ಎಂದು ಹೇಳಿದ್ದಾರೆ.

ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಪರಿಶೀಲಿಸದೇ ಇಂತಹ ವೀಡಿಯೋಗಳನ್ನು ಹಂಚುವುದು ಗಂಭೀರ ಪರಿಣಾಮ ಉಂಟುಮಾಡುತ್ತದೆ. “ಯಾವುದೇ ವೀಡಿಯೋವನ್ನು ಅಪ್ಲೋಡ್ ಮಾಡುವ ಮೊದಲು ಅದರ ನೈಜತೆಯನ್ನು ಖಚಿತಪಡಿಸಿಕೊಳ್ಳಬೇಕು. ಇನ್ನು ಮುಂದೆ ತಪ್ಪು ಮಾಹಿತಿಯನ್ನು ಹರಡುವವರು ಮಾತ್ರವಲ್ಲ, ಅದನ್ನು ಹಂಚುವವರ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವೀಡಿಯೋವನ್ನು ಮೊದಲು ಚಿತ್ರೀಕರಿಸಿ ಹಂಚಿದ ವ್ಯಕ್ತಿಯನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದ್ದು, ಸಂಬಂಧಿಸಿದವರಿಗೂ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ