ಬೆಂಗಳೂರು ರಸ್ತೆಯಲ್ಲಿ ನಿಯಮ ಉಲ್ಲಂಘಿಸಿದ್ದ ಲ್ಯಾಂಬೋರ್ಗಿನಿ ಕಾರು 
ರಾಜ್ಯ

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಕರ್ನಾಟಕ ಹೈಕೋರ್ಟ್‌ ಪರಿಗಣಿಸಿದೆ.

ಬೆಂಗಳೂರು: ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರನಿಗೆ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಹೈಕೋರ್ಟ್ ಸಮುದಾಯ ಶಿಕ್ಷೆ ವಿಧಿಸಿದೆ.

ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಹಸಿರು ಲ್ಯಾಂಬೊರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತೆ ಲ್ಯಾಂಬೊರ್ಗಿನಿಯಲ್ಲಿ ಬನ್ನಿ ಎಂದು ಮೌಖಿಕವಾಗಿ ಸೂಚಿಸಿದೆ.

ಕೆಲವರಿಗೆ ಹೈ ಎಂಡ್ ಕಾರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅತಿ ವೇಗದ ಚಾಲನೆ ಮಾಡೊ ಖಯಾಲಿಯಾಗಿದೆ. ಇದೇ ರೀತಿ ಅಜಾಗರೂಕತೆಯಿಂದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಸಮುದಾಯ ಸೇವಾ ಶಿಕ್ಷೆ ವಿಧಿಸಿದೆ.

ಆರೋಪಿಯು ತನ್ನದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಿನಲ್ಲಿ ವಾಪಸ್ ಬರಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಹಸಿರು ಲ್ಯಾಂಬೋರ್ಗಿನಿಯಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತದೇ ಕಾರಿನಲ್ಲಿ ವಾಪಸ್ ಬನ್ನಿ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮೌಖಿಕವಾಗಿ ಸೂಚನೆ ನೀಡಿದೆ.

ಜನವರಿ 20 ರಂದು ಚಿರಂತನ್ ಎಂಬಾತ ಕೆಂಗೇರಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ತನ್ನ ಲ್ಯಾಂಬೋರ್ಗಿನಿ ಕಾರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ. ಈ ಸಂಬಂಧ ಬಿಎನ್‌ಎಸ್ 281 ಮತ್ತು ಐಎಂವಿ ಕಾಯ್ದೆಯ 177ನೇ ಸೆಕ್ಷನ್ ಅಡಿಯಲ್ಲಿ ಆತನ ವಿರುದ್ಧ ಕೆಂಗೇರಿ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್‌ ರದ್ದು ಕೋರಿ ಲ್ಯಾಂಬೋರ್ಗಿನಿ ಕಾರು ಚಾಲಕ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದ ಮುಂದೆ ಬಂದಿತ್ತು. ವಿಚಾರಣೆ ವೇಳೆ ಆರೋಪಿ ಪರ ವಕೀಲರು, ತಮ್ಮ ಕಕ್ಷಿದಾರನಿಗೆ ಪಶ್ಚಾತ್ತಾಪವಾಗಿದೆ ಎಂದು ತಿಳಿಸಿದ್ದರು. ಅಲ್ಲದೇ, ಬಿಎನ್‌ಎಸ್ ಅಡಿಯಲ್ಲಿ ಸಮುದಾಯ ಸೇವೆಗೆ ಕೆಲವು ಅವಕಾಶಗಳಿದ್ದು, ಆರೋಪಿಯು ಮಕ್ಕಳಿಗೆ ಸಂಚಾರ ನಿಯಮಗಳ ಕುರಿತು ಪಾಠ ಮಾಡುವುದಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರು ಲ್ಯಾಂಬೋರ್ಗಿನಿ ಕಾರಿನಲ್ಲಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಮಕ್ಕಳಿಗೆ ಸಂಚಾರ ನಿಯಮಗಳ ಪಾಠ ಮಾಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು. ಬದಲಿಗೆ ಆರೋಪಿಯಿಂದ ಗಿಡಗಳನ್ನು ನೆಡಿಸುವುದು ಸೂಕ್ತ ಎಂದು ನ್ಯಾಯಾಲಯಕ್ಕೆ ಸಲಹೆ ನೀಡಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್ ಪೀಠ, ಚಿರಂತನ್‌ಗೆ ಕಸ ಗುಡಿಸುವ ಸಮುದಾಯ ಶಿಕ್ಷೆ ವಿಧಿಸಿತು. ಈ ಸಮುದಾಯ ಶಿಕ್ಷೆಯ ದಿನಾಂಕ ಮತ್ತು ಸಮಯವನ್ನು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ