ಚಿತ್ರನಟ ಹರೀಶ್  
ರಾಜ್ಯ

ಕೊಡಗಿನಲ್ಲಿ ಭೀಕರ ಅಪಘಾತ: ಚಿತ್ರನಟ ಹರೀಶ್ ಸಾವು

ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು.

ಕೊಡಗು: ಕಳೆದ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ (40ವ) ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ನಡೆದಿದೆ.

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ನಟ ಸಾವು

ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ನಿನ್ನೆ ಕೆಲಸ ಮುಗಿಸಿಕೊಂಡು ತಡರಾತ್ರಿ ಹರೀಶ್ ಅವರು ಕುಶಾಲನಗರದಿಂದ ತಮ್ಮ ಸ್ವಗ್ರಾಮವಾದ ಹೊಸಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಹಲವು ಸಿನಿಮಾಗಳಲ್ಲಿ, ಧಾರವಾಹಿಗಳಲ್ಲಿ ಅಭಿನಯ

ಮೃತ ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸಿದ್ದರು.

ಸ್ಥಳಕ್ಕೆ ಪೊಲೀಸರು ಭೇಟಿ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT