ಖಾಸಗಿ ಬಸ್ ಪಲ್ಟಿ 
ರಾಜ್ಯ

ಶಿವಮೊಗ್ಗ: ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ; 17 ಪ್ರಯಾಣಿಕರಿಗೆ ಗಾಯ

ಗಾಯಾಳುಗಳಲ್ಲಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ ಹದಿನೇಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಲ್ಲಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳೆಲ್ಲರನ್ನೂ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇಂದು ಬೆಳಗ್ಗೆ ಖಾಸಗಿ ಬಸ್ ಶಿವಮೊಗ್ಗದಿಂದ ಶಿಕಾರಿಪುರ ಪಟ್ಟಣವನ್ನು ಪ್ರವೇಶಿಸಿದಾಗ ಈ ಅಪಘಾತ ಸಂಭವಿಸಿದೆ.

ಬಸ್ ಚಾಲಕ, ತನ್ನ ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಎಡಕ್ಕೆ ತಿರುಗಿಸಿದ್ದಾನೆ. ಹೀಗಾಗಿ, ಬಸ್ ಪಲ್ಟಿಯಾಗಿದೆ. ಇದರಿಂದ ಬಸ್​ನಲ್ಲಿದ್ದ 17ಕ್ಕೂ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.

ತಕ್ಷಣವೇ ಗಾಯಾಳುಗಳನ್ನು ಶಿಕಾರಿಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ, ಕೆಲವರಿಗೆ ಕೈ ಕಾಲು ಮುರಿತವಾದ ಕಾರಣಕ್ಕೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ‌ ರವಾನೆ ಮಾಡಲಾಗಿದೆ‌. ಅಲ್ಲಿಗೆ ಸಂಸದ ಬಿ. ವೈ. ರಾಘವೇಂದ್ರ ಅವರು ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.

ಘಟನೆ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!