ಸಿದ್ದರಾಮಯ್ಯ ಮತ್ತು ನಸೀರ್ ಅಹ್ಮದ್  
ರಾಜ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಾಸೀರ್ ಅಹ್ಮದ್ ವಜಾ..!

ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಯಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು.

ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿದ್ದರಾಮಯ್ಯ ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ ಶಮನ ಆಗಿಲ್ಲ. ದಾವಣಗೆರೆಯಲ್ಲಿ ಅಭ್ಯರ್ಥಿ ವಿಚಾರವಾಗಿ ನಡೆದ ಬೆಳವಣಿಗೆಯಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದರು. ಸಮರ್ಥ್ ಅವರನ್ನು ಸೋಲಿಸಲು ವಿರೋಧ ಪಕ್ಷದ ಮುಖಂಡರ ಜೊತೆಗೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಗಂಭೀರ ಆರೋಪದ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಬಳಿಕ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಲಾಗಿದೆ.

ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರಿಗೂ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಕೊಡುವಂತೆ ಸೂಚಿಸಲಾಗಿತ್ತು.

ಪರಿಷತ್ ಸದಸ್ಯ ನಸೀರ್ ಅಹ್ಮದ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ವಲಯಲ್ಲಿ ಗುರುತಿಸಿಕೊಂಡವರು. ಅಲ್ಲದೆ, ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಆಪ್ತರು. ದಾವಣಗೆರೆ ದಕ್ಷಿಣದಲ್ಲಿ ಬಂಡಾಯ ಎದ್ದಾಗ ಅದನ್ನು ಶಮನ ಮಾಡುವ ಜವಾಬ್ದಾರಿಯನ್ನು ಆರಂಭದಲ್ಲಿ ನಸೀರ್ ಅಹ್ಮದ್ ಅವರಿಗೆ ನೀಡಲಾಗಿತ್ತು.

ಸಾದಿಕ್ ಪೈಲ್ವಾನ್ ಬಂಡಾಯ ತೀವ್ರಗೊಂಡಿದ್ದರೆ ಅದು ಪಕ್ಷಕ್ಕೆ ಹಿನ್ನಡೆ ಆಗುತ್ತಿತ್ತು. ಹಾಗಾಗಿ ನಸೀರ್ ಅಹ್ಮದ್ ಅವರಿಗೆ ಪೈಲ್ವಾನ್ ಮನವೊಲಿಸುವಂತೆ ಸೂಚಿಸಲಾಗಿತ್ತು. ಆರಂಭದಲ್ಲಿ ಅವರು ಒಪ್ಪಿಗೆ ಸೂಚಿಸಿ ದಾವಣಗೆರೆ ತೆರಳಲು ಮುಂದಾಗಿದ್ದರು. ಆದರೆ ಬಳಿಕ ಹಿಂದೇಟು ಹಾಕಿದರು ಎಂಬ ಮಾಹಿತಿ ಇದೆ. ಅಲ್ಲದೆ, ಪ್ರಚಾರದಲ್ಲೂ ತೊಡಗಿಸಿಕೊಳ್ಳದೆ ಅಂತರ ಕಾಯ್ದುಕೊಂಡರು ಎಂಬ ಮಾಹಿತಿಯೂ ಇದೆ. ಈ ಹಿನ್ನೆಲೆಯಲ್ಲಿ ನಸೀರ್ ಅಹ್ಮದ್ ಅವರ ತಲೆದಂಡಕ್ಕೆ ಸೂಚನೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಅಣ್ವಸ್ತ್ರ ವಿಚಾರದಲ್ಲಿ ಅಮೆರಿಕಾ ಕಠಿಣ ನಿಲುವು; ಮಾತುಕತೆಯಲ್ಲಿ ಪ್ರಗತಿ ಸಾಧಿಸಿದ್ದೇವೆ, ಮುಂದಿನ ನಿರ್ಧಾರ ಇರಾನ್'ಗೆ ಬಿಟ್ಟದ್ದು- ಜೆ.ಡಿ.ವ್ಯಾನ್ಸ್

ಅಮೆರಿಕಾ–ಇರಾನ್ ಸಂಘರ್ಷ: ಶಾಶ್ವತ ಶಾಂತಿ ಸಾಧನೆ ಒಂದು ದಿನದಲ್ಲಿ ಸಾಧ್ಯವಿಲ್ಲ, ಸಂಘರ್ಷ ಅಂತ್ಯಕ್ಕೆ ಇನ್ನೂ ಸಮಯ ಬೇಕು; ಪಾಕಿಸ್ತಾನ

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ 'ಕೈ' ಶಾಸಕರ ಲಾಬಿ: ಖರ್ಗೆ ಭೇಟಿ, ಸಚಿವ ಸಂಪುಟ ಪುನಾರಚನೆಗೆ ಒತ್ತಾಯ

ತನ್ನನ್ನೇ ಯೇಸು ಕ್ರಿಸ್ತನಿಗೆ ಹೋಲಿಸಿಕೊಂಡು AI ಚಿತ್ರ ಪೋಸ್ಟ್: ಭಾರೀ ಟೀಕೆ-ವಿರೋಧ ಬೆನ್ನಲ್ಲೇ ಫೋಟೋ ಡಿಲೀಟ್ ಮಾಡಿದ ಟ್ರಂಪ್

IPL 2026: ರಾಜಸ್ಥಾನದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆ 57 ರನ್ ಗಳ ಜಯ; ಒಂದೇ ಓವರ್ ನಲ್ಲಿ 3 ವಿಕೆಟ್; ಚರಿತ್ರೆ ಸೃಷ್ಟಿಸಿದ ಪ್ರಫುಲ್ ಹಿಂಗೆ

SCROLL FOR NEXT