ತಂದೆ ಮಲ್ಲಿಕಾರ್ಜುನ ಮತ್ತು ಸಿದ್ದಾರ್ಥ್ 
ರಾಜ್ಯ

ವಿಜಯಪುರ: ನೀನು ನನ್ನನ್ನು ಹೋಲುತ್ತಿಲ್ಲ; 6 ವರ್ಷದ ಮಗನನ್ನೇ ಕೊಂದ ತಂದೆ!

ಸಿದ್ದಾರ್ಥ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಪ್ರತಿನಿತ್ಯ ಪಾಪಿ ಮಲ್ಲಿಕಾರ್ಜುನನ್ನ ಚುಡಾಯಿಸಿದ್ದರಂತೆ. ಇದನ್ನ ಗಂಭೀರವಾಗಿ ಪರಿಗಣಿಸಿ ಮಲ್ಲಿಕಾರ್ಜುನ ಮಗ ಸಿದ್ಧಾರ್ಥನನ್ನ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ.

ವಿಜಯಪುರ: ತನ್ನ ಮಗ ತನ್ನಂತೆ ಹೋಲಿಕೆಯಲ್ಲಿ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ತಂದೆಯೇ ಮಗನನ್ನು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ನಾಗಠಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಿದ್ಧಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಯಾದ ಬಾಲಕ. ಈತನ ತಂದೆ ಮಲ್ಲಿಕಾರ್ಜುನ ಅರಕೇರಿ ಹತ್ಯೆ ಮಾಡಿರುವ ಆರೋಪಿಯಾಗಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ.

6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಪ್ರತಿನಿತ್ಯ ಪಾಪಿ ಮಲ್ಲಿಕಾರ್ಜುನನ್ನ ಚುಡಾಯಿಸಿದ್ದರಂತೆ. ಇದನ್ನ ಗಂಭೀರವಾಗಿ ಪರಿಗಣಿಸಿ ಮಲ್ಲಿಕಾರ್ಜುನ ಮಗ ಸಿದ್ಧಾರ್ಥನನ್ನ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ.

ಮಾರ್ಚ್ 16 ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗನನ್ನು ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ. ಬಳಿಕ ಮಗನನ್ನು ಸಿಂದಗಿ ಬಳಿ ಶಾಲೆಗೆ ಸೇರಿಸಿ ಹಾಸ್ಟೆಲ್‌ನಲ್ಲಿ ಇಟ್ಟಿದ್ದಾಗಿ ಕುಟುಂಬಸ್ಥರಿಗೆ ಸುಳ್ಳು ಹೇಳಿದ್ದ.

ಆದರೆ ಏಪ್ರಿಲ್ 1ರಂದು ಮಗನ ಹುಟ್ಟು ಹಬ್ಬದ ದಿನ ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರಿ ಪಟ್ಟು ಹಿಡಿದಿದ್ದಾಳೆ. ಮಗ ಎಲ್ಲಿದ್ದಾನೆ ಎಂದು ಕೇಳಿದಾಗ ಮನೆಯಿಂದ ಮಲ್ಲಿಕಾರ್ಜುನ ಓಡಿ ಹೋಗಿದ್ದನಂತೆ. ಇದರಿಂದಾಗಿ ಅನುಮಾನ ಬಂದು ಪೊಲೀಸರಿಗೆ ತಾಯಿ ಭಾಗ್ಯಶ್ರೀ ದೂರು ನೀಡಿದ್ದಾಳೆ.

ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತನೇ ಮಗುವನ್ನು ಕರೆದುಕೊಂಡು ಹೋಗಿ ಮಹಾರಾಷ್ಟ್ರದ ಕರಾಡ ಜಿಲ್ಲೆಯ ವಡೋಲಿ ಬಳಿ ಕೃಷ್ಣಾ ನದಿಗೆ ಎಸೆದು ಕೊಂದಿದ್ದ. ಪೊಲೀಸರ ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಹಿರಂಗವಾಗಿದೆ. ಮಹಾರಾಷ್ಟ್ರದಲ್ಲಿ ಬಾಲಕನ ಶವ ಕೂಡ ಪತ್ತೆಯಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್.ಕೆ. ಅಡ್ವಾಣಿ, ಮನೀಶ್ ಸಿಸೋಡಿಯಾ ಸೇರಿದಂತೆ ದೆಹಲಿಯ 33.13 ಲಕ್ಷ ಮತದಾರರಿಗೆ SIR ನೋಟಿಸ್‌!

ವಾರಣಾಸಿ ಎನ್‌ಕೌಂಟರ್‌ನಲ್ಲಿ 30 ಲಕ್ಷ ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಹತ್ಯೆ!

ರಷ್ಯಾ ಸಂಸತ್ ಚುನಾವಣೆ ಮಧ್ಯೆ ಮಾಸ್ಕೋ ಮೇಲೆ ಉಕ್ರೇನ್‌ನಿಂದ ಭೀಕರ ದಾಳಿ: 1,000ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ!

ಸಲ್ಮಾನ್ ಖಾನ್ ದ್ವಂದ ನಿಲುವುಳ್ಳ ಮೂರ್ಖ: 'ಬಿಗ್ ಬಾಸ್ ಮಾಜಿ ಸ್ಪರ್ಧಿ' ಸೋಫಿಯಾ ಹಯಾತ್ ಕಿಡಿ!

ರಣಜಿ ಟ್ರೋಫಿ 2026-27: ಹೈದರಾಬಾದ್ ತಂಡದ ನಾಯಕರಾಗಿ ಮೊಹಮ್ಮದ್ ಸಿರಾಜ್ ನೇಮಕ!