ಅನಂತಕುಮಾರ್ ಹೆಗಡೆ 
ರಾಜ್ಯ

ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಬೆಂಗಳೂರು: ದಾಬಸ್​ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಸ್ಲಿಂ ಕುಟುಂಬದೊಂದಿಗಿನ ಗಲಾಟೆ ಪ್ರಕರಣದಲ್ಲಿ ಅಶುತೋಷ್‌ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ಇಂದು ತಡೆ ನೀಡಿದೆ.

ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಅನಂತಕುಮಾರ್ ಹೆಗಡೆ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು ಆದೇಶ ಹೊರಡಿಸಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್​ನಲ್ಲಿ ಅಶುತೋಷ್​ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲ ಎಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು.

2025ರ ಜೂನ್​​ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪ ಕೇಳಿಬಂದಿತ್ತು. ಅನಂತ್‌ ಕುಮಾರ್‌ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್​ ಟೇಕ್​ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್​ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್​​ಮ್ಯಾನ್​ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್‌, ಇಲಿಯಾಜ್ ಖಾನ್‌ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಬಳಿಕ ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್​​ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್‌ A2, ಕಾರು ಚಾಲಕ ಮಹೇಶ್‌ A3 ಮತ್ತು ಇತರರ ವಿರುದ್ಧ ಬಿಎನ್​ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಎಫ್​ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!