ಕರ್ನಾಟಕ ಹೈಕೋರ್ಟ್  
ರಾಜ್ಯ

ಮಹಿಳಾ ನೌಕರರಿಗೆ ತಿಂಗಳಿಗೆ ಒಮ್ಮೆ ಕಡ್ಡಾಯ ಋತುಚಕ್ರ ರಜೆ ನೀಡಬೇಕು: ಹೈಕೋರ್ಟ್

ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್​​ ನೀಡಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

ನೊಂದವರ ಗಾಯದ ಮೇಲೆ ಉಪ್ಪು ಸುರಿದಂತೆ: ಜಾಮೀನು ಸಿಕ್ಕಿದ್ದಕ್ಕೆ ಕೊಲೆ ಆರೋಪಿ ಕುಟುಂಬಸ್ಥರ ಪಾರ್ಟಿ, ನಟ ವಿಶಾಲ್ ಆಕ್ರೋಶ, Video!

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಕೇಸರಿ ಉಡುಪಿನಲ್ಲಿರುವ ತಿರುವಳ್ಳುವರ್ ಫೋಟೋಗೆ ಗೌರವ ಸಲ್ಲಿಸಿದ ರಾಜ್ಯಪಾಲರ ವಿರುದ್ಧ TVK, DMK ಕಿಡಿ

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ, 5 ಮಂದಿ ಸಾವು

SCROLL FOR NEXT