ಕರ್ನಾಟಕ ಸಚಿವ ಸಂಪುಟ ಸಭೆ (ಸಂಗ್ರಹ ಚಿತ್ರ) 
ರಾಜ್ಯ

SC ಒಳಮೀಸಲಾತಿ: CS ನೇತೃತ್ವದ ತಾಂತ್ರಿಕ ಸಮಿತಿ ರಚನೆ, ಏಪ್ರಿಲ್ 24ಕ್ಕೆ ವಿಶೇಷ ಸಂಪುಟ ಸಭೆ

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಸಮಿತಿ ವರದಿ ಮೇಲೆ ಏ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ತೀರ್ಮಾನಿಸಿದ್ದು, ಏಪ್ರಿಲ್ 24ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್​​ಸಿ ಒಳಮೀಸಲಾತಿ ಸಂಬಂಧ ಚರ್ಚೆ ನಡೆಯಿತು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿದ್ದು, ಸಮಿತಿ ವರದಿ ಮೇಲೆ ಏ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ತೀರ್ಮಾನಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ತಾಂತ್ರಿಕ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ಇಲಾಖೆ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಇರಲಿದ್ದಾರೆ. ಈ ಸಮಿತಿ ಒಳಮೀಸಲಾತಿ ಸಮೀಕರಣದ ಬಗ್ಗೆ ಪರಿಶೀಲಿಸಿ ವರದಿ ನೀಡಲಿದೆ. ಈ ವರದಿಯನ್ನು ಏಪ್ರಿಲ್ 24ರಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಅಂದು ಒಳಮೀಸಲಾತಿ ಬಗ್ಗೆಯೇ ಬಹುತೇಕ ಚರ್ಚೆ ನಡೆಯಲಿದೆ. ಅಲ್ಲದೆ, ಎಸ್​​ಸಿ ಎ, ಬಿ ಮತ್ತು ಸಿ ಮೂರು ವರ್ಗಗಳಿಗೆ ಎಷ್ಟು ಒಳಮೀಸಲಾತಿ ನೀಡಬೇಕು ಎಂದು ತೀರ್ಮಾನಕ್ಕೆ ಬರಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! video

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut