ಅಪಘಾತ ತೀವ್ರತೆಗೆ ಹೊತ್ತಿ ಉರಿದ ವಾಹನಗಳು  
ರಾಜ್ಯ

ಯಾದಗಿರಿ: ಕಾರು-VRL ಬಸ್​​ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಯಾದಗಿರಿ: ಕಾರು ಮತ್ತು ವಿಆರ್ ಎಲ್ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಜನ ಸಾವಿಗೀಡಾಗಿದ್ದಾರೆ.

ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಮ್ಮನ್ನು Blackmail ಮಾಡಲು ಸಾಧ್ಯವಿಲ್ಲ; Strait Of Hormuz ನಿರ್ಬಂಧ ಬೆನ್ನಲ್ಲೇ Iran ವಿರುದ್ಧ Donald Trump ಕೆಂಡಾಮಂಡಲ!

Strait of Hormuz: 'ನೀವೇ ಅನುಮತಿ ಕೊಟ್ಟು ಈಗ ಗುಂಡು ಹಾರಿಸುತ್ತಿದ್ದೀರಿ': Iran ದಾಳಿಗೊಳಗಾದ ಭಾರತೀಯ ತೈಲ ಟ್ಯಾಂಕರ್‌ ಆಡಿಯೋ ವೈರಲ್!

"ಕಡಲೆಕಾಯಿ"ಯಷ್ಟು ಬೆಂಬಲ: ಕರ್ನಾಟಕ ಸರ್ಕಾರದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅರವಿಂದ್ ಕುಮಾರ್ ಬೇಸರ

ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಲ್ಲಿ ಮುಂದುವರೆದರೆ ಬಂಗಾಳ ಬಾಂಗ್ಲಾದೇಶಿ ಮುಸ್ಲಿಮರ ಪಾಲು- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ

IPL 2026: CSK ವಿರುದ್ಧ SRH 10 ರನ್ ಗಳ ರೋಚಕ ಜಯ, ಮಿಂಚಿದ Ayush Mhatre

SCROLL FOR NEXT