ರಾಜ್ಯ

ಬಳ್ಳಾರಿ: ಪ್ಯಾರಚೂಟ್‌ ತರಬೇತಿ ವೇಳೆ 50 ಅಡಿ ಎತ್ತರದಿಂದ ಜಿಗಿದಿದ್ದ ಯೋಧಗೆ ಕಾಲು ಮುರಿತ; Video!

ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು.

ಬಳ್ಳಾರಿ: ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿಯಲ್ಲಿ ಪ್ಯಾರಚೂಟ್ ತರಬೇತಿ ವೇಳೆ ಆಯತಪ್ಪಿ 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಯೋಧರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ವರ್ಷದ ಯೋಧ ಚಿನ್ನರಾಜ್ ಗಾಯಗೊಂಡಿದ್ದರು. ತಕ್ಷಣವೇ ಪ್ರಾಥಮಿಕ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯದ ತೀವ್ರತೆ ಹೆಚ್ಚಿದ್ದ ಕಾರಣ ವೈದ್ಯರ ಸಲಹೆಯಂತೆ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು.

ಶುಕ್ರವಾರ ಬೆಳಿಗ್ಗೆ ಸುಮಾರು 417 ಸೈನಿಕರ ತಂಡಕ್ಕೆ ಪ್ಯಾರಚೂಟ್ ಜಿಗಿತದ ತರಬೇತಿ ನೀಡಲಾಗುತ್ತಿತ್ತು. ಈ ವೇಳೆ ಚಿನ್ನರಾಜ್ ಮತ್ತು ಇನ್ನೊಬ್ಬ ಯೋಧನ ಪ್ಯಾರಚೂಟ್ ನಲ್ಲಿ ತಾಂತ್ರಿಕ ಸಮಸ್ಯೆ ಆಗಿ ಆಯತಪ್ಪಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರು. ಈ ವೇಳೆ ತೀವ್ರತೆಗೆ ಅವರ ಕಾಲಿನ ಮೂಳೆ ಮುರಿದಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ