ರಾಜ್ಯ

ಆಫ್ರಿಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳು: ಬನ್ನೇರುಘಟ್ಟ ಮೃಗಾಲಯಕ್ಕೆ ನಾಲ್ಕು ಚೀತಾಗಳ ಆಗಮನ..!

ವನ್ಯಜೀವಿಗಳನ್ನು ಕ್ವಾರಂಟೈನಿನಲ್ಲಿ ಇರಿಸಿ, 30 ದಿನಗಳ ಕಾಲ ನಿಗದಿತ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಯಾವುದೇ ಸೋಂಕು ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರು: ತಡರಾತ್ರಿ ದಕ್ಷಿಣ ಆಫ್ರಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿವೆ.

ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಬರಮಾಡಿಕೊಂಡರು.

ಈ ವೇಳೆ ಅಧಿಕಾರಿಗಳು ಮತ್ತು ಪಶುವೈದ್ಯಾಧಿಕಾರಿಗಳಿಗೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ ಚೀತಾಗಳಿಗೆ ವಾತಾವರಣ ಹಾಗೂ ಹವಾಮಾನ ಬದಲಾವಣೆಯಿಂದ ಯಾವುದೇ ತೊಂದರೆ ಆಗದಂತೆ, ಆರೋಗ್ಯ ಸಮಸ್ಯೆಗಳು ಎದುರಾಗದಂತೆ ಸೂಕ್ತ ನಿಗಾ ವಹಿಸಬೇಕು.

ವನ್ಯಜೀವಿಗಳನ್ನು ಕ್ವಾರಂಟೈನಿನಲ್ಲಿ ಇರಿಸಿ, 30 ದಿನಗಳ ಕಾಲ ನಿಗದಿತ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಯಾವುದೇ ಸೋಂಕು ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಸೂಚನೆ ನೀಡಿದರು.

ಒಂದು ಕಾಲದಲ್ಲಿ ನಮ್ಮ ಕರ್ನಾಟಕದ ಕಾಡುಗಳಲ್ಲಿ ಕಾಣಿಸಿಕೊಂಡಿದ್ದ ಚೀತಾಗಳು ಇಂದು ಇಲ್ಲದಂತಾಗಿವೆ. ಕನಿಷ್ಠ ಮೃಗಾಲಯಗಳಲ್ಲಾದರೂ ಜನತೆಗೆ ಈ ಅಪರೂಪದ ವನ್ಯಜೀವಿಗಳನ್ನು ನೋಡುವ ಅವಕಾಶ ದೊರಕಬೇಕು. ಈ ನಿಟ್ಟಿನಲ್ಲಿ ಅವುಗಳ ಸುರಕ್ಷತೆ ಮತ್ತು ಸಂರಕ್ಷಣೆಗೆ ಅತ್ಯಂತ ಆದ್ಯತೆ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ: ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ನಟಿ ಕತ್ರಿನಾ ಕೈಫ್ ಬಾಡಿ ಶೇಮಿಂಗ್; Salman Khan ಕ್ಲಾಸ್ ಬೆನ್ನಲ್ಲೇ ಕ್ಷಮೆ ಕೋರಿದ ಪಾಕಿಸ್ತಾನ RJ! Video

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!