ತಾಪಮಾನ (ಸಂಗ್ರಹ ಚಿತ್ರ) online desk
ರಾಜ್ಯ

ಬೀದರ್‌ನಲ್ಲಿ ಕುಸಿದು ಬಿದ್ದು ಯುವಕ ಸಾವು: ಬಿಸಿಲ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ..?

ಮೃತ ಯುವಕನನ್ನು ಉತ್ತರಪ್ರದೇಶ ಮೂಲದ ಮೊಹ್ಮದ್ ಸಮೀರ ಲಯಿಕ್ ಅಹ್ಮದ್ (20) ಎಂದು ಗುರ್ತಿಸಲಾಗಿದೆ. ಈತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಕಮಲನಗರ (ಬೀದರ್): ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕ ಏರಿಕೆಯಾಗುತ್ತಲೇ ಇದ್ದು, ಬೀದರ್‌ನಲ್ಲಂತೂ ಮನೆಯಿಂದ ಹೊರಬರಲೂ ಆಗದಷ್ಟು ಬಿಸಿಲ ಬೇಗೆ ಹೆಚ್ಚಿದೆ. ಈ ನಡುವೆ ಬಿಸಿಲ ಝಳಕ್ಕೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆಯೊಂದು ಪಟ್ಟಣದ ಹೊರವಲಯದ ಡಿಗ್ಗಿ ಗ್ರಾಮಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿ-50 ರಸ್ತೆ ಬಳಿ ನಡೆದಿದೆ.

ಮೃತ ಯುವಕನನ್ನು ಉತ್ತರಪ್ರದೇಶ ಮೂಲದ ಮೊಹ್ಮದ್ ಸಮೀರ ಲಯಿಕ್ ಅಹ್ಮದ್ (20) ಎಂದು ಗುರ್ತಿಸಲಾಗಿದೆ. ಈತ ಕಮಲನಗರದಲ್ಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ತಾಪಮಾನದ ಏರಿಕೆಯಿಂದ ತಾಳಲಾರದೆ ಮಿರ್ಜಾಪುರ ಪಲ್ಲಾದ ನಿವಾಸಿ ಮಹ್ಮದ್ ಸಮೀರ ಮೆಕ್ಯಾನಿಕ್ ಅಂಗಡಿ ಬಳಿ ನೀರು ಕುಡಿದು, ತಲೆ ಸುತ್ತು ಬರುತ್ತಿದೆ ಎಂದು ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ. ನಂತರ ಡಿಗ್ಗಿ ಗ್ರಾಮದ ಕಡೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ತಾಪಮಾನ ಏರಿಕೆಯಾಗಿ ಹೀಟ್ ಸ್ಟ್ರೋಕ್ ನಿಂದಲೇ ಯುವಕ ಸಾವನ್ನಪ್ಪಿದ್ದಾನೆಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಂತರ ನಿಖರ ಕಾರಣ ತಿಳಿಯಲಿದೆ.

ರಾಜ್ಯದಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಜನರಲ್ಲಿ ಆತಂಕ ಉಂಟುಮಾಡುತ್ತಿವೆ. ಈ ನಡುವೆ ಸಾರ್ವಜನಿಕರು ಬಿಸಿಲಿನ ವೇಳೆ ಹೆಚ್ಚು ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ