ಬೈಕ್ ಟ್ಯಾಕ್ಸಿ (ಸಂಗ್ರಹ ಚಿತ್ರ) 
ರಾಜ್ಯ

ಬೈಕ್ ಟ್ಯಾಕ್ಸಿ ಸೇವೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!

ಜನವರಿಯಲ್ಲಿ ಆದೇಶ ನೀಡಿದ್ದ ಹೈಕೋರ್ಟ್, ಬೈಕ್ ಟ್ಯಾಕ್ಸಿ ಸೇವೆಗಳಿಗೆ ರಾಜ್ಯದಲ್ಲಿ ಸ್ಪಷ್ಟ ನಿಯಮಾವಳಿ ಇಲ್ಲ ಎಂಬ ಕಾರಣಕ್ಕೆ ಹೇರಲಾಗಿದ್ದ ನಿಷೇಧವನ್ನು ರದ್ದುಪಡಿಸಿತ್ತು. ಇದರಿಂದ ಸೇವೆಗಳು ಪುನರಾರಂಭವಾಗಿದ್ದವು.

ಬೆಂಗಳೂರು: ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳ ಕುರಿತ ಕಾನೂನು ಹೋರಾಟಕ್ಕೆ ಹೊಸ ತಿರುವು ಸಿಕ್ಕಿದ್ದು, ಹೈಕೋರ್ಟ್ ನೀಡಿದ ಅನುಮತಿ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆಯೊಂದಿಗೆ ಶೀಘ್ರದಲ್ಲೇ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿಯಲ್ಲಿ ಆದೇಶ ನೀಡಿದ್ದ ಹೈಕೋರ್ಟ್, ಬೈಕ್ ಟ್ಯಾಕ್ಸಿ ಸೇವೆಗಳಿಗೆ ರಾಜ್ಯದಲ್ಲಿ ಸ್ಪಷ್ಟ ನಿಯಮಾವಳಿ ಇಲ್ಲ ಎಂಬ ಕಾರಣಕ್ಕೆ ಹೇರಲಾಗಿದ್ದ ನಿಷೇಧವನ್ನು ರದ್ದುಪಡಿಸಿತ್ತು. ಇದರಿಂದ ಸೇವೆಗಳು ಪುನರಾರಂಭವಾಗಿದ್ದವು.

2025ರ ಜೂನ್‌ನಲ್ಲಿ ನ್ಯಾಯಾಲಯದ ಸೂಚನೆಗಳ ಮೇರೆಗೆ ಈ ಸೇವೆಗಳು ಸ್ಥಗಿತಗೊಂಡಿದ್ದವು. ಇತ್ತೀಚಿನ ಆದೇಶದಿಂದ ತಾತ್ಕಾಲಿಕವಾಗಿ ಕಾನೂನು ಅಡ್ಡಿ ನಿವಾರಣೆಯಾಗಿದ್ದರೂ, ಇದೀಗ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗುವ ನಿರ್ಧಾರದಿಂದ ಸಮಸ್ಯೆ ಇನ್ನೂ ಅಂತಿಮವಾಗಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ.

ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಆದಿ ನಾರಾಯಣ ಮಾತನಾಡಿ, ದೇಶದ ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಕಾನೂನುಬದ್ಧವಾಗಿದೆ. ಎಲ್ಲರಿಗೂ ಒಂದೇ ರೀತಿಯ ಕಾನೂನು ಇರಬೇಕು” ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಸುಮಾರು ಆರು ಲಕ್ಷ ಕುಟುಂಬಗಳು ಈ ಸೇವೆಗಳ ಮೇಲೆ ಜೀವನ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಮಹಾಸಂಘದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಮಾತನಾಡಿ, ಸರ್ಕಾರ ಮೊದಲಿಗೆ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ನೀಡಿದ್ದ 90 ದಿನಗಳ ಗಡುವನ್ನು ತಪ್ಪಿಸಿಕೊಂಡಿತ್ತು. ಆದರೆ, ಇದೀಗ ಆಂತರಿಕ ಚರ್ಚೆಗಳ ಬಳಿಕ ಸುಪ್ರೀಂ ಕೋರ್ಟ್‌ಗೆ ಹೋಗುವ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": ಇನ್‌ಸ್ಟಾಗ್ರಾಮ್ ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ