ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಬಾಲ ಗರ್ಭಿಣಿಯರಿಗೆ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್; ನಿಯಮ ಉಲ್ಲಂಘನೆ; ಲೋಕಾಯುಕ್ತ ತನಿಖಾ ವರದಿಯಲ್ಲಿ ಬಹಿರಂಗ!

ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳು (PCPNDT) ಕಾಯ್ದೆಯ ವಿಶೇಷವಾಗಿ ಪ್ರತಿ 90 ದಿನಗಳಿಗೊಮ್ಮೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ಸೆಕ್ಷನ್ 8(1) ರ ಸ್ಪಷ್ಟ ಉಲ್ಲಂಘನೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೈಸೂರು: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನಾಸ್ಟಿಕ್ ಕೇಂದ್ರಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇತ್ತೀಚಿಗೆ ದಾಳಿ ನಡೆಸಿದಾಗ ಬಾಲ ಗರ್ಭಿಣಿಯರಿಗೆ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡಿರುವುದು ಸೇರಿದಂತೆ ಹಲವು ಗಂಭೀರ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ಲೋಕಾಯುಕ್ತ ತಂಡಗಳು ಕಳೆದ ಎರಡು ದಿನಗಳಲ್ಲಿ ಹಲವು ತಾಲ್ಲೂಕು ಆಸ್ಪತ್ರೆಗಳು ಮತ್ತು ಜಿಲ್ಲೆಯಾದ್ಯಂತ ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ ಮೇಲೆ ದಾಳಿ ನಡೆಸಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ಬಾಲಗರ್ಭಿಣಿಯರಿಗೆ ನಿಯಮ ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪ ಕೇಳಿಬಂದಿದೆ,

ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳು (PCPNDT) ಕಾಯ್ದೆಯ ವಿಶೇಷವಾಗಿ ಪ್ರತಿ 90 ದಿನಗಳಿಗೊಮ್ಮೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ಸೆಕ್ಷನ್ 8(1) ರ ಸ್ಪಷ್ಟ ಉಲ್ಲಂಘನೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲಾ ಆರೋಗ್ಯ ಅಧಿಕಾರಿ (DHO) ಕಚೇರಿಯು ಅಂತಹ ತಪಾಸಣೆಗಳ ಯಾವುದೇ ದಾಖಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಅದು ಹೇಳಿದೆ.

ಅಧಿಕಾರಿಗಳು, ನಿರ್ದಿಷ್ಟವಾಗಿ ಮಂಡ್ಯ ಮತ್ತು ಪಾಂಡವಪುರದ ಉಪವಿಭಾಗಾಧಿಕಾರಿಗಳು ಸಹ ಕಾನೂನಿನಡಿಯಲ್ಲಿ ಅಗತ್ಯವಿರುವಂತೆ ರೋಗನಿರ್ಣಯ ಕೇಂದ್ರಗಳಲ್ಲಿ ಕಡ್ಡಾಯ ತಪಾಸಣೆಗಳನ್ನು ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ವರದಿಯು ಬಹಿರಂಗಪಡಿಸಿದೆ.

18 ವರ್ಷ ಮೇಲ್ಪಟ್ಟ 20 ವರ್ಷದೊಳಗಿನ ಯುವತಿಯರಿಗೆ ವಯಸ್ಸಿನ ದೃಢೀಕರಣ ದಾಖಲಾತಿ ಪಡೆಯದೇ 64 ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಖಾಸಗಿ ಡಯಾಗ್ನಾಸ್ಟಿಕ್ ಸೆಂಟರ್ ಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆ ವೈದ್ಯರು ಸ್ಕ್ಯಾನಿಂಗ್ ಮಾಡಿಸಲು ಖಾಸಗಿ ಸೆಂಟರ್ ಗಳಿಗೆ ಶಿಫಾರಸ್ಸು ಮಾಡಿದ್ದಾರೆ ಎಂದು ಲೋಪವನ್ನು ಲೋಕಾಯುಕ್ತ ವರದಿಯಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ