ಅಪಘಾತ 
ರಾಜ್ಯ

ಬೆಳಗಾವಿ: ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ, ಇಬ್ಬರ ದುರ್ಮರಣ; ನೂರಾರು ಕೋಳಿಗಳ ಸಾವು

ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಮೃತಪಟ್ಟಿವೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ವಾಸಿಂ (28) ಮತ್ತು ಮುಬಾರಕ್ (22) ಎಂದು ಗುರುತಿಸಲಾಗಿದೆ. ವಾಹನದ ಚಾಲಕ ಬಸವರಾಜ ಈರಪ್ಪ ಹಂಚಿನಮನಿ (37) ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಕು ಸಾಕಾಣಿಕೆ ವಾಹನವು ಕೊಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆಯ ಸೊರಬಗೆ ಕೋಳಿ ಸಾಗಣೆ ಮಾಡುತ್ತಿತ್ತು.

ಅಪಘಾತದಲ್ಲಿ ಹಲವಾರು ಕೋಳಿಗಳು ಸಾವನ್ನಪ್ಪಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡವರು ಮತ್ತು ಮೃತರ ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!