ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರಿಯತಮೆ 
ರಾಜ್ಯ

'ಫಾರಿನ್ ಸ್ಟೈಲ್' Love ಮಾಡ್ತೀನಿ: ಕೈಕಾಲು ಕಟ್ಟಿ ಬೆಂಕಿ ಇಟ್ಟ ಪ್ರಿಯತಮೆ, ಪ್ರಿಯಕರ ಸುಟ್ಟು ಕರಕಲು!

ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ ಇಟ್ಟು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ಈ ಧಾರುಣ ಘಟನೆ ವರದಿಯಾಗಿದ್ದು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

‘ವೆಸ್ಟರ್ನ್ ಸ್ಟೈಲ್’ನಲ್ಲಿ ನಿನಗೆ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟಕ್ಕೂ ಆಗಿದ್ದೇನು?

ಪೊಲೀಸ್ ಮೂಲಗಳ ಪ್ರಕಾರ ಮೃತ ಕಿರಣ್ ಮತ್ತು ಆರೋಪಿ ಯುವತಿ ಪ್ರೇರಣಾ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಪ್ರೀತಿಸುತ್ತಿದ್ದರು. ಮಂಗಳವಾರ ಪ್ರೇರಣಾ ತನ್ನ ಪ್ರಿಯಕರ ಕಿರಣ್ ನನ್ನು ಮನೆಗೆ ಕರೆದಿದ್ದಳು. ಅಂದು ಆಕೆಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಮನೆಗೆ ಬಂದಿದ್ದನು.

'ವಿದೇಶಿ ಶೈಲಿಯಲ್ಲಿ ಮಾಡ್ತೀನಿ'

ಇದೇ ಸಂದರ್ಭದಲ್ಲಿ ಯುವತಿ ಪ್ರೇರಣಾ 'ನಿನಗೆ ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ' ಎಂದು ಹೇಳಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ 'ಯಾಕೆ ಇಷ್ಟು ಟೈಟ್ ಆಗಿ ಕಟ್ತಿದ್ದೀಯಾ?' ಎಂದು ಕೇಳಿದಾಗ, 'ಇದು ಫಾರಿನ್ ಸ್ಟೈಲ್, ಸುಮ್ಮನಿರು' ಎಂದು ನಂಬಿಸಿದ್ದಾಳೆ.

ಕಿರಣ್ ಕೈಕಾಲು ಬಿಡಿಸಿಕೊಳ್ಳಲಾಗದೇ ಸಂಪೂರ್ಣ ಅಸಹಾಯಕನಾದ ಮೇಲೆ ಆಕೆ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಕೃತ್ಯ ನಡೆಯುವ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಳೆ ಎಂದೂ ಹೇಳಲಾಗಿದೆ.

ಪೊಲೀಸರ ಪ್ರಕಾರ ಯುವತಿ ಪ್ರೇರಣಾ ತನ್ನ ಪ್ರಿಯಕರ ತನ್ನನ್ನು ಬೇಕೆಂದೇ ದೂರವಿಡುತ್ತಿದ್ದಾನೆ ಎಂದು ಅನುಮಾನಗೊಂಡಿದ್ದಳು. ತನಗೆ ಸಮಯ ನೀಡುತ್ತಿಲ್ಲ. ತನ್ನೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ. ತನ್ನ ಪ್ರೀತಿಯನ್ನು ನಿರ್ಲಕ್ಷಿಸುತ್ತಿದ್ದಾನೆ ಎಂದು ಕೋಪಗೊಂಡಿದ್ದಳು. ಇದೇ ಕಾರಣಕ್ಕೆ ಈ ಕೃತ್ಯ ವೆಸಗಿರಬಹುದು ಎಂದು ಶಂಕಿಸಲಾಗಿದೆ.

ಪೊಲೀಸರ ಮುಂದೆ ಹೇಳಿದ್ದೇನು?

ಇನ್ನು ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದಾಗ ಆರೋಪಿ ಯುವತಿ ಮಹಾ ನಾಟಕ ಮಾಡಿದ್ದಾಳೆ. ಆರಂಭದಲ್ಲಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಯುವತಿ, 'ನಾನು ಟಾಯ್ಲೆಟ್‌ನಲ್ಲಿದ್ದೆ, ಆಗ ಸೌಂಡ್ ಬಂತು. ಹೊರಬಂದು ನೋಡಿದಾಗ ಕಿರಣ್ ಬೆಂಕಿ ಹಚ್ಚಿಕೊಂಡಿದ್ದ' ಎಂದು ಕಥೆ ಕಟ್ಟಿದ್ದಳು.

ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಕಿರಣ್ ಬೈಕ್‌ನಲ್ಲಿ ಬಂದಾಗ ಯಾವುದೇ ಪೆಟ್ರೋಲ್ ಕ್ಯಾನ್ ತಂದಿರಲಿಲ್ಲ ಎಂಬುದು ಸಿಸಿಟಿವಿ ಮತ್ತು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇದರಿಂದಾಗಿ ಪೆಟ್ರೋಲ್ ಅನ್ನು ಯುವತಿಯೇ ಮೊದಲೇ ತಂದಿಟ್ಟಿದ್ದಳು ಎಂಬ ಅನುಮಾನ ದಟ್ಟವಾಗಿದೆ. ಹೀಗಾಗಿ ಯುವತಿಯನ್ನು ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಡಿ.ಎಲ್. ನಾಗೇಶ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel