ನಟಿ ರನ್ಯಾ ರಾವ್ PTI
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: 1 ವರ್ಷದ ಬಳಿಕ ನಟಿ ರನ್ಯಾ ರಾವ್ ಗೆ ಜಾಮೀನು

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ. 2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಕೈಯಲ್ಲಿ ಲಾಕ್ ಆಗಿದ್ದರು. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ.

ತನಿಖೆ ವೇಳೆ ಆಭರಣ ವ್ಯಾಪಾರಿ ಸಾಹಿಲ್ ಜೈನ್ ಸಹ ಈ ಜಾಲದಲ್ಲಿದ್ದು, ಸುಮಾರು 40 ಕೋಟಿ ರೂ. ಮೌಲ್ಯದ ಸುಮಾರು 49 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮೂಲಕ ಮಾರಾಟ ಮಾಡಲು ರನ್ಯಾಗೆ ನೆರವಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ದೊಡ್ಡ ಮಟ್ಟದ ಹವಾಲಾ ವಹಿವಾಟು ನಡೆಸಿದ್ದು, ಕಮಿಷನ್ ಕೂಡಾ ಪಡೆದಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರ ಬಯಸುತ್ತದೆ, ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ, ಸಿಎಂ ಡಿಕೆ ಶಿವಕುಮಾರ್ ತಿರುಗೇಟು!

ಪತಿಯೊಂದಿಗೆ ಜಗಳ: ಮಗಳು ಸೇರಿದಂತೆ ಇಬ್ಬರು ಮಕ್ಕಳನ್ನು ಬಾವಿಗೆಸದ ಪತ್ನಿ, ಸೋದರಳಿಯ ಸಾವು!