ಉಪ ರಾಷ್ಟ್ರಪತಿ ಸಿ ಪಿ ರಾಧಾಕೃಷ್ಣನ್  
ರಾಜ್ಯ

'ಅವರಿಗೆ ಟೆರರಿಸ್ಟ್ ಮತ್ತು ಟೆರರಿಸ್ಟ್ ಗಳಿಗೆ ಟೆರರ್ ನಡುವಿನ ವ್ಯತ್ಯಾಸ ಗೊತ್ತಿಲ್ಲ ಅನಿಸುತ್ತದೆ': ಖರ್ಗೆ ಸಮ್ಮುಖದಲ್ಲೇ ಕುಟುಕಿದ ಉಪರಾಷ್ಟ್ರಪತಿ; Video

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಉಂಟಾದ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬೀದರ್: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪ್ರತಿಕ್ರಿಯೆ ನೀಡಿದ್ದು, ಭಯೋತ್ಪಾದಕರು ಮತ್ತು “ಭಯೋತ್ಪಾದಕರಿಗೆ ಭಯ” ಎಂಬುದರ ನಡುವಿನ ವ್ಯತ್ಯಾಸವನ್ನು ಗುರುತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಉಂಟಾದ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಬೀದರ್‌ನ ಶ್ರೀ ಚೆನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು ಮಹಾಸ್ವಾಮೀಜಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಮಾತನಾಡಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲೇ ಈ ಹೇಳಿಕೆ ನೀಡಿದರು.

“ನಮ್ಮ ಖರ್ಗೆಯವರ ಬಗ್ಗೆ ನನಗೆ ಸ್ವಲ್ಪ ಭಿನ್ನಾಭಿಪ್ರಾಯ ಇದೆ. ಕೆಲವೊಮ್ಮೆ ಖರ್ಗೆಯವರು ಕಪ್ಪು-ಬಿಳುಪಿನ ನಡುವಿನ ವ್ಯತ್ಯಾಸವನ್ನೂ, ಕೆಲವೊಮ್ಮೆ ಭಯೋತ್ಪಾದಕರು ಮತ್ತು ಭಯೋತ್ಪಾದಕರಿಗೆ ಭಯ ಎಂಬುದರ ನಡುವಿನ ವ್ಯತ್ಯಾಸವನ್ನೂ ಗುರುತಿಸಲು ಸಾಧ್ಯವಾಗುತ್ತಿಲ್ಲವೆಂದು ನನಗೆ ಅನಿಸುತ್ತದೆ. ಅದನ್ನು ಬಿಟ್ಟರೆ ನನಗೆ ಅವರ ಜೊತೆ ಯಾವುದೇ ಸಮಸ್ಯೆ ಇಲ್ಲ; ಅವರು ನನ್ನ ಉತ್ತಮ ಸ್ನೇಹಿತರು ಎಂದು ಕುಟುಕಿದರು.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ಟೀಕಿಸುವ ವೇಳೆ ಮಲ್ಲಿಕಾರ್ಜುನ ಖರ್ಗೆಯವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದರಿಂದ ಈ ವಿವಾದ ಉಂಟಾಯಿತು. ನಂತರ ಅವರು ಸ್ಪಷ್ಟನೆ ನೀಡಿ, ಪ್ರಧಾನಿ “ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಭಯಪಡಿಸುತ್ತಿದ್ದಾರೆ” ಎಂಬ ಅರ್ಥದಲ್ಲಿ ಹೇಳಿದ್ದೇ ಹೊರತು, ಅವರನ್ನು ಭಯೋತ್ಪಾದಕ ಎಂದು ಕರೆಯಲಿಲ್ಲ ಎಂದು ಹೇಳಿದರು.

ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ದೇಶದ 140 ಕೋಟಿ ಜನರಿಗೆ ಅವಮಾನವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ, ಕದನ ವಿರಾಮ ಅನಿಶ್ಚಿತತೆ..?

'ಕದನ ವಿರಾಮ ವಿಸ್ತರಿಸುತ್ತೇವೆ, ಇರಾನ್‌ಗೆ ಮಾತುಕತೆಗೆ ಸಮಯ ನೀಡುತ್ತೇವೆ; ಹಾರ್ಮುಜ್ ಜಲಸಂಧಿ ನಿರ್ಬಂಧ ಮುಂದುವರಿಕೆ': ಡೊನಾಲ್ಡ್ ಟ್ರಂಪ್

ಪಹಲ್ಗಾಮ್ ಉಗ್ರರ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್

ಏ.23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆ

ಬಿಟ್‌ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್

SCROLL FOR NEXT