ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಕ್ಕೆ ಬೇಸಿಗೆ ಬಿಸಿಲ ಬರೆ: KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ; ಬೆಂಗಳೂರಿಗೆ ಜಲ ಕಂಟಕ?

ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ.

ಬೆಂಗಳೂರು: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕನ್ನಂಬಾಡಿ ಕಟ್ಟೆ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಮಟ್ಟಕ್ಕೆ ಕುಸಿದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 100 ಅಡಿಗಿಂತ ಕೆಳಕ್ಕೆ ಅಂದರೆ 99 ಅಡಿಗೆ ಕುಸಿದಿದ್ದು, ಮಳೆಗಾಲ ವಿಳಂಬವಾದರೆ ಕುಡಿಯುವ ನೀರಿಗಾಗಿ ದೊಡ್ಡ ಮಟ್ಟದ ಹಾಹಾಕಾರ ಎದುರಾಗುವ ಭೀತಿ ಆವರಿಸಿದೆ.

ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ. ಇದರಲ್ಲಿ 7 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 15 ಟಿಎಂಸಿ ಮಾತ್ರ. ಪ್ರಸ್ತುತ ಜಲಾಶಯಕ್ಕೆ 66 ಕ್ಯೂಸೆಕ್ ಒಳಹರಿವು ಇದ್ದರೆ, ಹೊರಹರಿವು 4,388 ಕ್ಯೂಸೆಕ್ ಇದೆ.

ಕಾವೇರಿ ನೀರನ್ನೇ ನಂಬಿಕೊಂಡಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಮತ್ತು ಇತರ ನಗರಗಳಿಗೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.

ಸದ್ಯ ಲಭ್ಯವಿರುವ ನೀರನ್ನು ಕಟ್ಟು ಪದ್ಧತಿಯಲ್ಲಿ ಬೆಳೆಗೆ ನೀಡಬೇಕಿದೆ ಮತ್ತು ಕುಡಿಯಲು ಮೀಸಲಿಡಬೇಕಾದ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗಿದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ತಡವಾದರೆ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ಕಾವೇರಿ ನೀರು ಅವಲಂಬಿತ ಜನರಿಗೆ ನೀರಿನ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ.

ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ ಕಂಡಿರುವುದು ಮುಂದೆ ಅನಾವೃಷ್ಟಿ ಪರಿಸ್ಥಿತಿ ಎದುರಾಗುತ್ತಾ ಎಂಬ ಆತಂಕ ಕಾಡುತ್ತಿದೆ. ಪ್ರಸ್ತುತ ಪ್ರಮುಖ ಜಲಾಶಯಗಳಲ್ಲಿ ಶೇ.36ಎಷ್ಟು ಮಾತ್ರ ನೀರು ಸಂಗ್ರಹವಿದೆ. ಸದ್ಯ ಪ್ರಮುಖ ಜಲಾಶಯಗಳಲ್ಲಿ 321 ಟಿಎಂಸಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 330 ಟಿಎಂಸಿ ನೀರಿತ್ತು ಎಂದು ಕಂದಾಯ ಇಲಾಖೆ ಮಾಹಿತಿ ನೀಡಿದೆ.

ಜಲಸಂಪನ್ಮೂಲ ಇಲಾಖೆಯ ಅಂಕಿಅಂಶದ ಪ್ರಕಾರ ರಾಜ್ಯದ ಪ್ರಮುಖ ಜಲವಿದ್ಯುತ್ ಜಲಾಶಯಗಳಾದ ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಪ್ರಸ್ತುತ ಸುಮಾರು 107 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಏಪ್ರಿಲ್ ಎರಡನೇ ವಾರದ ಅವಧಿಗೆ ಸುಮಾರು 124 ಟಿಎಂಸಿ ನೀರು ಲಭ್ಯವಿತ್ತು.

ಈ ಮೂರು ಜಲಾಶಯಗಳ ಗರಿಷ್ಠ ಸಾಮರ್ಥ್ಯ 327.63 ಟಿಎಂಸಿ ಇದೆ. ಈ ಪೈಕಿ ಪ್ರಸ್ತುತ ಶೇಖರಣೆ ಇರುವುದು ಕೇವಲ ಶೇ.33ರಷ್ಟು ಮಾತ್ರ. ಲಿಂಗನಮಕ್ಕಿ ಜಲಾಶಯಕ್ಕೆ ಸುಮಾರು 50 ಕ್ಯುಸೆಕ್ ಒಳಹರಿವಿದೆ. ಉಳಿದ ಜಲಾಶಯಗಳಿಗೆ ಯಾವುದೇ ಒಳಹರಿವು ಇಲ್ಲ.

ಕಾವೇರಿ ಕಣಿವೆಯಲ್ಲಿನ ಪ್ರಮುಖ ಜಲಾಶಯಗಳಾದ ಹಾರಂಗಿ, ಹೇಮಾವತಿ, ಕೆ.ಆರ್.ಎಸ್, ಕಬಿನಿಯಲ್ಲಿ ಪ್ರಸ್ತುತ ಒಟ್ಟು ಸುಮಾರು 57 ಟಿಎಂಸಿ ನೀರಿ ಶೇಖರಣೆ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಜಲಾಶಯಗಳಲ್ಲಿ ಒಟ್ಟು ಸುಮಾರು 58 ಟಿಎಂಸಿ ನೀರು ಸಂಗ್ರಹ ಇತ್ತು. ಈ ನಾಲ್ಕು ಜಲಾಶಯಗಳ ಗರಿಷ್ಠ ಸಾಮರ್ಥ್ಯ 114.57 ಟಿಎಂಸಿ ಇದೆ. ಇದರ ಪೈಕಿ ಸುಮಾರು ಶೇ.46 ಮಾತ್ರ ನೀರಿನ ಸಂಗ್ರಹವಿದೆ ಎಂದು ಇಲಾಖೆ ಅಂಕಿಅಂಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ