ಭೀಮಪ್ಪ ರಬಕವಿ 
ರಾಜ್ಯ

ಬಾಗಲಕೋಟೆ: ಪೊಲೀಸ್‌ ಠಾಣೆ ಮೇಲೆ ಲೋಕಾಯುಕ್ತ ದಾಳಿ; ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ PSI; ಕಾನ್ಸ್‌ಟೇಬಲ್ ಬಂಧನ

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಅವರನ್ನು ಬಂಧಿಸಲಾಗಿದೆ.

ಬಾಗಲಕೋಟೆ: ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದು, 1.70 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಪಿಎಸ್ಐ ಮತ್ತು ಕಾನ್ಸ್‌ಟೇಬಲ್ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಅವರನ್ನು ಬಂಧಿಸಲಾಗಿದೆ.

ಆರೋಪಿಗಳು, ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್‌ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ