ಸಚಿವ ಮಧು ಬಂಗಾರಪ್ಪ  
ರಾಜ್ಯ

ಹಲವು ಗೊಂದಲಗಳ ನಡುವೆ ನಾಳೆ SSLC ಫಲಿತಾಂಶ ಪ್ರಕಟ: ಕೋರ್ಟ್ ಆದೇಶದಂತೆ ಹಿಂದಿಗೆ ಅಂಕ

ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು: ಹಲವು ಗೊಂದಲಗಳ ನಡುವೆ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಹೇಳಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಕೋರ್ಟ್‌ ಆದೇಶದಂತೆ ಈ ಬಾರಿ ಹಿಂದಿ ಭಾಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ವರ್ಷ ಹಿಂದಿಗೆ ಅಂಕ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಅಂಕದ ಬದಲಿಗೆ ಗ್ರೇಡ್ ನೀಡಲು ತೀರ್ಮಾನಿಸಿತ್ತು. ಆದರೆ ಹೈಕೋರ್ಟ್ ಇದಕ್ಕೆ ತಡೆ ನೀಡಿದ್ದು, ಗ್ರೇಡ ಬದಲು ಅಂಕ ನೀಡುವಂತೆ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!