ಮಧು ಬಂಗಾರಪ್ಪ  
ರಾಜ್ಯ

ತೃತೀಯ ಭಾಷೆ ಅಂಕ ವಿವಾದ: ಕಾನೂನು ಸಲಹೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು!

ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು.

ಬೆಂಗಳೂರು: ತೃತೀಯ ಭಾಷೆ ಅಂಕ ವಿವಾದ ತೀವ್ರವಾಗುತ್ತಿರುವ ಹಿನ್ನೆಲೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.

ಹೈಕೋರ್ಟ್ ಮಂಗಳವಾರ ನೀಡಿದ ನಿರ್ದೇಶನದಂತೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂದು ಸೂಚಿಸಿದೆ. ಈ ತೀರ್ಪಿನ ಹಿನ್ನೆಲೆ ಸರ್ಕಾರದ ಮುಂದಿನ ನಡೆ ಏನು ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಬಂಗಾರಪ್ಪ ಅವರು, “ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗುವುದಿಲ್ಲ” ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಮೌಲ್ಯಮಾಪನ ವಿಧಾನದಲ್ಲಿ ಬದಲಾವಣೆ ಕುರಿತಂತೆ ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕ ಅಭಿಪ್ರಾಯವನ್ನು ಆಹ್ವಾನಿಸಿತ್ತು.

ಇದರ ಬೆನ್ನಲ್ಲೇ ಕಲಬುರಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ ನಮೋಶಿ ಅವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.

ಶೈಕ್ಷಣಿಕ ವರ್ಷ ಪೂರ್ಣಗೊಂಡ ನಂತರ ಮೌಲ್ಯಮಾಪನ ವಿಧಾನ ಬದಲಿಸುವುದು ವಿದ್ಯಾರ್ಥಿಗಳ ನ್ಯಾಯಸಮ್ಮತ ನಿರೀಕ್ಷೆಗೆ ಧಕ್ಕೆ ಉಂಟುಮಾಡುತ್ತದೆ. ಅಂಕಗಳನ್ನು ಗ್ರೇಡಿಂಗ್ ಆಗಿ ಬದಲಿಸುವುದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ